Chamarajanagara: ಗುಂಡ್ಲುಪೇಟೆ (Gundlupete) ತಾಲೂಕಿನ ಕಲ್ಲಹಳ್ಳಿ ಬಳಿ ಒಂದು ಹೆಣ್ಣು ಹುಲಿ (Tiger) ಹಾಗೂ ಮೂರು ಮರಿ ಹುಲಿಗಳನ್ನು ಅರಣ್ಯ ಇಲಾಖೆ (Forest Department) ಸಿಬ್ಬಂದಿ ಸೆರೆ ಹಿಡಿದಿದ್ದಾರೆ.

Chamarajanagara: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಲ್ಲಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಒಂದು ಹೆಣ್ಣು ಹುಲಿ ಹಾಗೂ ಮೂರು ಮರಿ ಹುಲಿಗಳನ್ನು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.
ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ
ಕಳೆದ ಕೆಲವು ದಿನಗಳಿಂದ ಈ ಹುಲಿ ಗ್ರಾಮಾಂತರ ಪ್ರದೇಶಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಬಲಿ ಪಡೆಯುತ್ತಿದ್ದ ಕಾರಣದಿಂದ ರೈತರಲ್ಲಿ ಆತಂಕ ಉಂಟಾಗಿತ್ತು. ಹೊಲಗಳಿಗೆ ಹೋಗುವುದಕ್ಕೂ ರೈತರು ಹೆದರುತ್ತಿದ್ದರು.
ಸಾಕಾನೆಗಳ ಸಹಾಯದಿಂದ ಹೆಣ್ಣು ಹುಲಿ ಸೆರೆ
ಇನ್ನು ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಸಾಕಾನೆಗಳ ಸಹಾಯದಿಂದ ವಿಶೇಷ ಕಾರ್ಯಾಚರಣೆ ನಡೆಸಿ, ಅರವಳಿಕೆ ಚುಚ್ಚುಮದ್ದು ನೀಡಿ ಹುಲಿಯನ್ನು ಸುರಕ್ಷಿತವಾಗಿ ಸೆರೆಹಿಡಿದರು.
ಇದನ್ನೂ ಓದಿ: Tiger Attack: ಮೈಸೂರಿನಲ್ಲಿ ಮತ್ತೆ ಹುಲಿ ದಾಳಿ – ಮತ್ತೊಬ್ಬ ರೈತ ಬಲಿ..!
ಕಲ್ಲಹಳ್ಳಿ ಗ್ರಾಮದಲ್ಲಿ ಹುಲಿ ಸೆರೆ- ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಕಾರ್ಯಾಚರಣೆ ವೇಳೆ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದರು. ಸೆರೆ ಕಾರ್ಯ ಯಶಸ್ವಿಯಾಗುತ್ತಿದ್ದಂತೆಯೇ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದು, ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು.
ಅರಣ್ಯ ಇಲಾಖೆ ಅಧಿಕಾರಿಗಳ ಸಾಹಸ ಯಶಸ್ವಿ
ಅರಣ್ಯ ಇಲಾಖೆ ಮೂಲಗಳ ಪ್ರಕಾರ, ಸೆರೆಹಿಡಿದ ಹುಲಿ ಮತ್ತು ಅದರ ಮರಿಗಳನ್ನು ಅರಣ್ಯ ವ್ಯಾಪ್ತಿಯೊಳಗೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕ್ರಮ ಕೈಗೊಳ್ಳಲಾಗಿದೆ.
MUST WATCH: ಜನರಿಗೆ ಕಾಟ ಕೊಡ್ತಿದ್ದ ಚಿರತೆ ರೋಚಕ ಕಾರ್ಯಾಚರಣೆಯಲ್ಲಿ ಸೆರೆ




