Karnataka Govt: ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಸಮೀಕ್ಷಾದಾರರು ಮತ್ತು ಮೇಲ್ವಿಚಾರಕರಿಗೆ ಗೌರವಧನ ಪಾವತಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Karnataka Govt: ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ತೊಡಗಿಕೊಂಡಿದ್ದ ಸಮೀಕ್ಷಾದಾರರು ಮತ್ತು ಮೇಲ್ವಿಚಾರಕರಿಗೆ ಗೌರವಧನ ಪಾವತಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರ ಅನುಸಾರವಾಗಿ ಜಿಲ್ಲಾಧಿಕಾರಿಗಳಿಗೆ ಅನುದಾನ ಬಿಡುಗಡೆ ಮಾಡಲು ಸೂಚಿಸಲಾಗಿದೆ.
ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆ ಸಿಬ್ಬಂದಿಗೆ ಗೌರವಧನ ಬಿಡುಗಡೆಗೆ ಸರ್ಕಾರದ ಆದೇಶ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿದ್ದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯು ರಾಜ್ಯದಾದ್ಯಂತ ನಡೆಯಿತು. ಈ ಸಮೀಕ್ಷೆಗೆ ಸಂಬಂಧಿಸಿದಂತೆ ಆಯೋಗದಿಂದ ನೀಡಲಾದ ಪೂರ್ವ ಆದೇಶಗಳ ಪ್ರಕಾರ ಅನುದಾನವನ್ನು ಬಿಡುಗಡೆ ಮಾಡಲಾಗಿತ್ತು.

ಇದನ್ನೂ ಓದಿ: Social Educational Survey In karnataka : Cm ಸಿದ್ದರಾಮಯ್ಯ ಖಡಕ್ ಆದೇಶ
ಸಮೀಕ್ಷಾದಾರರು, ಮೇಲ್ವಿಚಾರಕರಿಗೆ ರಾಜ್ಯ ಸರ್ಕಾರದಿಂದ ಗೌರವಧನ ಪಾವತಿ
ಇತ್ತೀಚಿನ ಸರ್ಕಾರದ ಆದೇಶದಂತೆ, ಸಮೀಕ್ಷೆಯಲ್ಲಿ ಭಾಗವಹಿಸಿದ ಸಮೀಕ್ಷಾದಾರರು ಹಾಗೂ ಮೇಲ್ವಿಚಾರಕರಿಗೆ ಗೌರವಧನ ನಿಗದಿಪಡಿಸಲಾಗಿದೆ. ಈ ಮೊತ್ತವನ್ನು ಪಾವತಿಸಲು ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ಹಣಕಾಸು ಬಿಡುಗಡೆ ಮಾಡಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಜಿಲ್ಲಾಧಿಕಾರಿಗಳಿಗೆ ಗೌರವಧನ ಬಿಡುಗಡೆ ಸೂಚನೆ – ಸರ್ಕಾರದ ಪ್ರಕಟಣೆ
ಈ ಕ್ರಮದಿಂದ ರಾಜ್ಯದಾದ್ಯಂತ ಶ್ರಮಪಟ್ಟು ಕಾರ್ಯನಿರ್ವಹಿಸಿದ ಸಾವಿರಾರು ಸಮೀಕ್ಷಾ ಸಿಬ್ಬಂದಿಗೆ ಶ್ರಮದ ಮಾನ್ಯತೆ ಸಿಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
MUST WATCH: CASTE CENSUS | ಸಮೀಕ್ಷೆದಾರರಿಗೆ ಸರ್ವೇ ಕಾಟ- ಮನೆಗಳು ಸಿಗದೇ ಶಿಕ್ಷಕರ ಅಲೆದಾಟ |




