Breaking News: ಬಾಲಿವುಡ್ನ ಹಿರಿಯ ನಟ ಧರ್ಮೇಂದ್ರ (Actor Dharmendra) (89) ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Breaking News: ಬಾಲಿವುಡ್ನ ಹಿರಿಯ ನಟ ಧರ್ಮೇಂದ್ರ (Dharmendra) ಅವರನ್ನು ತೀವ್ರ ಉಸಿರಾಟ ತೊಂದರೆಯಿಂದಾಗಿ ಮುಂಬೈನ ಖಾಸಗಿ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಧರ್ಮೇಂದ್ರ ಆರೋಗ್ಯದಲ್ಲಿ ಏರುಪೇರು..!
89 ವರ್ಷದ ಧರ್ಮೇಂದ್ರ ಅವರ ಆರೋಗ್ಯದಲ್ಲಿ ಇಂದು (ನವೆಂಬರ್ 10) ಬೆಳಿಗ್ಗೆ ಏರುಪೇರು ಉಂಟಾಗಿದ್ದು, ಸದ್ಯ ಅವರು ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಉಸಿರಾಟ ತೊಂದರೆಯಿಂದ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು
ಇದೇ ಡಿಸೆಂಬರ್ 8ರಂದು ಧರ್ಮೇಂದ್ರ ಅವರು ತಮ್ಮ 90ನೇ ಜನ್ಮದಿನ ಆಚರಿಸಲಿದ್ದಾರೆ. ಕಳೆದ ವಾರವೂ ಅವರು ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವರ್ಷ ಏಪ್ರಿಲ್ನಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: Actor Dharmendra : ನಟ ಧರ್ಮೇಂದ್ರ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು
ಹಿಂದಿ ಚಿತ್ರರಂಗದಲ್ಲಿ ಅಪಾರ ಕೀರ್ತಿಗಳಿಸಿರುವ ನಟ ಧರ್ಮೇಂದ್ರ
ಧರ್ಮೇಂದ್ರ ಅವರು ಆರು ದಶಕಗಳಿಗಿಂತಲೂ ಹೆಚ್ಚು ಕಾಲ ಹಿಂದಿ ಚಿತ್ರರಂಗದಲ್ಲಿ ಅಪಾರ ಕೀರ್ತಿಯನ್ನು ಗಳಿಸಿರುವ ಹಿರಿಯ ಕಲಾವಿದರಾಗಿದ್ದಾರೆ. 1960ರಲ್ಲಿ ‘ದಿಲ್ ಭೀ ತೇರಾ ಹಮ್ ಭೀ ತೇರೆ’ ಮೂಲಕ ಬಾಲಿವುಡ್ಗೆ ಪಾದಾರ್ಪಣೆ ಮಾಡಿದ ಅವರು, ಬಂದಿನಿ, ಅನುಪಮಾ, ಶೋಲೆ, ಚುಪ್ಕೆ ಚುಪ್ಕೆ, ಮೇರಾ ಗಾಂವ್ ಮೇರಾ ದೇಶ್, ಡ್ರೀಮ್ ಗರ್ಲ್ ಮುಂತಾದ ಹಿಟ್ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.
ಡಿಸೆಂಬರ್ 25ರಂದು ಬಿಡುಗಡೆಯಾಗಲಿರುವ ಇಕ್ಕಿಸ್ ಸಿನಿಮಾ
ಇತ್ತೀಚೆಗೆ 2025ರ ಆರಂಭದಲ್ಲಿ ಧರ್ಮೇಂದ್ರ ಅವರು ಶಾಹಿದ್ ಕಪೂರ್ ಮತ್ತು ಕೃತಿ ಸನೋನ್ ನಟನೆಯ ತೇರಿ ಬಾತೋ ಮೇ ಐಸಾ ಉಲ್ಜಾ ಜಿಯಾ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಡಿಸೆಂಬರ್ 25ರಂದು ಬಿಡುಗಡೆಯಾಗಲಿರುವ ಇಕ್ಕಿಸ್ ಸಿನಿಮಾದಲ್ಲೂ ಅವರು ಕಾಣಿಸಿಕೊಳ್ಳಲಿದ್ದಾರೆ.
MUST WATCH: Shivarajkumar : ನಟ ಶಿವಣ್ಣನನ್ನು ನೋಡಲು ಮುಗಿಬಿದ್ದ ಫ್ಯಾನ್ಸ್..!




