Breaking News: ಬಾಲಿವುಡ್ನ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಧರ್ಮೇಂದ್ರ ನಿಧನದ ಸುದ್ದಿ ಪ್ರಸಾರ ಮಾಡಿದ ಬೆನ್ನಲ್ಲೇ ಧರ್ಮೇಂದ್ರ ಪತ್ನಿ ಹೇಮಾಮಾಲಿನಿ ಟ್ವೀಟ್ ಮಾಡಿ ಬೇಸರ ಹೊರಹಾಕಿದ್ದಾರೆ.

Breaking News: ಬಾಲಿವುಡ್ನ ಹಿರಿಯ ನಟ ಧರ್ಮೇಂದ್ರ ಅವರನ್ನು ತೀವ್ರ ನಿಗಾ ಘಟಕದಲ್ಲಿ (ICU) ದಾಖಲಿಸಲಾಗಿದ್ದು, ವೆಂಟಿಲೇಟರ್ ಸಹಾಯದಿಂದ ಚಿಕಿತ್ಸೆ ನೀಡಲಾಗುತ್ತಿದೆ.
ಧರ್ಮೇಂದ್ರ ಆಸ್ಪತ್ರೆಗೆ ದಾಖಲು
ಧರ್ಮೇಂದ್ರ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದರೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಧರ್ಮೇಂದ್ರ ನಿಧನದ ಸುಳ್ಳು ಸುದ್ದಿ — ಪತ್ನಿ ಹೇಮಾಮಾಲಿನಿ ತೀವ್ರ ಬೇಸರ
ಆದರೆ, ಕೆಲವು ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ “ಧರ್ಮೇಂದ್ರ ನಿಧನ” ಎಂಬ ಸುಳ್ಳು ಸುದ್ದಿ ಹರಡುತ್ತಿರುವ ಹಿನ್ನೆಲೆಯಲ್ಲಿ, ಕುಟುಂಬದವರು ಮತ್ತು ಅಭಿಮಾನಿಗಳು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಧರ್ಮೇಂದ್ರ ಆರೋಗ್ಯದ ಕುರಿತು ಹೇಮಾಮಾಲಿನಿ ಟ್ವೀಟ್
ಈ ಬಗ್ಗೆ ನಟಿಯೂ ಸಂಸದೆಯೂ ಆಗಿರುವ ಧರ್ಮೇಂದ್ರ ಅವರ ಪತ್ನಿ ಹೇಮಾಮಾಲಿನಿ ಅವರು ತಮ್ಮ ಟ್ವೀಟ್ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲು…!
ಸುಳ್ಳು ಸುದ್ದಿಗಳ ವಿರುದ್ಧ ಹೇಮಾಮಾಲಿನಿ ಕಿಡಿ: “ಕುಟುಂಬದ ಗೌರವ ಕಾಪಾಡಿ!”
“ಚಿಕಿತ್ಸೆಗೆ ಸ್ಪಂದಿಸುತ್ತಿರುವ ಮತ್ತು ಚೇತರಿಸಿಕೊಳ್ಳುತ್ತಿರುವ ವ್ಯಕ್ತಿಯ ಬಗ್ಗೆ ಜವಾಬ್ದಾರಿಯುತ ಮಾಧ್ಯಮಗಳು ಸುಳ್ಳು ಸುದ್ದಿಗಳನ್ನು ಹೇಗೆ ಹರಡಬಹುದು? ಇದು ಅತ್ಯಂತ ಬೇಜವಾಬ್ದಾರಿ ಮತ್ತು ಅಗೌರವದ ಕೆಲಸ. ದಯವಿಟ್ಟು ಕುಟುಂಬದ ಗೌಪ್ಯತೆ ಹಾಗೂ ಗೌರವ ಕಾಪಾಡಿ.” ಎಂದು ಹೇಮಾಮಾಲಿನಿ ಟ್ವೀಟ್ ಮಾಡಿದ್ದಾರೆ.
ICU ಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಧರ್ಮೇಂದ್ರ — ಚೇತರಿಕೆಗಾಗಿ ಪ್ರಾರ್ಥನೆಗಳು
ಸದ್ಯ ಧರ್ಮೇಂದ್ರ ಅವರು ICU ಯಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಅವರ ಶೀಘ್ರ ಚೇತರಿಕೆಗೆ ಕುಟುಂಬಸ್ಥರು, ಆಪ್ತರು ಮತ್ತು ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
MUST WATCH: ACTOR VISHAL | MIKE ಹಿಡಿದು ಮಾತಾಡಲು ಕಷ್ಟ ಪಡುತ್ತಿರುವ ACTOR VISHAL




