
KARNATAKA RAIN : ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ (ಸೆಪ್ಟೆಂಬರ್ 23ರವರೆಗೆ) ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಮೋಡ ಕವಿದ ವಾತಾವರಣವಾಗಿದ್ದು, ಕೆಲ ಪ್ರದೇಶಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ ತಾಪಮಾನ 27°C ಹಾಗೂ ಕನಿಷ್ಠ ತಾಪಮಾನ 20°C ಇರುವ ನಿರೀಕ್ಷೆ ಇದೆ.
ನಾಳೆ ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನ ವಿಜಯಪುರ, ಕೊಪ್ಪಳ, ಕಲಬುರಗಿ, ಬೀದರ್, ಯಾದಗಿರಿ, ರಾಯ ಚೂರು ಜಿಲ್ಲೆಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಯಾಗುವ ಸಾಧ್ಯತೆ ಇದೆ.




