Bengaluru: ಕರ್ನಾಟಕ ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಲಾಗಿದೆ. ಈಗಾಗಲೇ ರಾಜ್ಯ ಸರ್ಕಾರವು ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘದ ಕುರಿತು ಮಾಹಿತಿ ನೀಡಿದೆ.

Bengaluru : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹಲಕ್ಷ್ಮೀ ಯೋಜನೆಯ ಯಜಮಾನಿಯರ ಸಬಲೀಕರಣಕ್ಕಾಗಿ ಹೊಸ ಹೆಜ್ಜೆ ಇಟ್ಟಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಹೊಸ ಸ್ವರೂಪ
‘ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ’ಕ್ಕೆ ಸಂಬಂಧಿಸಿದ ನೋಂದಾಯಿತ ಪ್ರಮಾಣಪತ್ರವನ್ನು ವಿಧಾನಸೌಧದ ಕಚೇರಿಯಲ್ಲಿ ಸಹಕಾರ ಇಲಾಖೆಯ ಅಪರ ನಿಬಂಧಕರಾದ ಲಕ್ಷ್ಮೀಪತಯ್ಯ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಹಸ್ತಾಂತರಿಸಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ರಿಂದ ಗೃಹಲಕ್ಷ್ಮಿ ಸಹಕಾರ ಸಂಘಕ್ಕೆ ಚಾಲನೆ
ರಾಜ್ಯದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಗೃಹಲಕ್ಷ್ಮೀ ಯೋಜನೆಯನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತಂದಿದ್ದು, ಇದೀಗ ಗೃಹಲಕ್ಷ್ಮೀ ಫಲಾನುಭವಿಯರ ಆರ್ಥಿಕ ಸಬಲೀಕರಣಕ್ಕಾಗಿ ಈ ಸಹಕಾರ ಸಂಘವನ್ನು ಸ್ಥಾಪಿಸಿದ್ದಾರೆ.

ನವೆಂಬರ್ 19ಕ್ಕೆ ಅಧಿಕೃತ ಚಾಲನೆ
ಈ ಸಂಘದ ಅಧಿಕೃತ ಚಾಲನೆ ನವೆಂಬರ್ 19ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವದಲ್ಲಿ ನಡೆಯಲಿದೆ.
ಇದನ್ನೂ ಓದಿ: Vijayanagara : ಗೃಹಲಕ್ಷ್ಮಿ ಹಣದಲ್ಲಿ ಸಿಎಂ ಸಿದ್ದರಾಮಯ್ಯ ಭಾವಚಿತ್ರ ಕೆತ್ತಿಸಿದ ಮಹಿಳೆ
ಮಹಿಳೆಯರ ಆರ್ಥಿಕ ಶಕ್ತಿಗಾಗಿ ಸಹಕಾರ ಸಂಘ ಸ್ಥಾಪನೆ
ಮಹಿಳೆಯರ ಸುರಕ್ಷತೆ ಮತ್ತು ಆರ್ಥಿಕ ಸ್ವಾವಲಂಬನೆ ನಮ್ಮ ಸರ್ಕಾರದ ಮುಖ್ಯ ಗುರಿ. ಗೃಹಲಕ್ಷ್ಮೀ ಯೋಜನೆಯ ಹಣವನ್ನು ಉಪಯೋಗಿಸಿ ಮಹಿಳೆಯರಿಗೆ ಆದಾಯದ ಮಾರ್ಗ ತೆರೆದಿಡುವುದು ಈ ಸಹಕಾರ ಸಂಘದ ಉದ್ದೇಶ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಗೃಹಲಕ್ಷ್ಮೀ ಸಹಕಾರ ಸಂಘದ ಉಪಯೋಗಗಳು:
- ಫಲಾನುಭವಿಗಳಿಗೆ ಕಡಿಮೆ ಬಡ್ಡಿದರದಲ್ಲಿ ₹3 ಲಕ್ಷದವರೆಗೂ ಸಾಲ ಸೌಲಭ್ಯ.
- ಮಹಿಳೆಯರಿಗೆ ಆರ್ಥಿಕ ಶಕ್ತಿ ಹಾಗೂ ಸ್ವಾವಲಂಬನೆ ನೀಡುವ ಉದ್ದೇಶ.
- ಗೃಹಲಕ್ಷ್ಮೀ ಯೋಜನೆಯ ಲಾಭವನ್ನು ಉತ್ಪಾದಕ ರೀತಿಯಲ್ಲಿ ತೊಡಗಿಸುವ ನವೀನ ಪ್ರಯತ್ನ.
ಗೃಹಲಕ್ಷ್ಮೀ ಯೋಜನೆಯ ಪ್ರಗತಿ:
- 1 ಕೋಟಿ 24 ಲಕ್ಷ 12 ಸಾವಿರಕ್ಕೂ ಹೆಚ್ಚು ಫಲಾನುಭವಿಗಳು ಯೋಜನೆಯಡಿ ಪ್ರಯೋಜನ ಪಡೆದಿದ್ದಾರೆ.
- ಇದುವರೆಗೆ ₹52,416 ಕೋಟಿಗೂ ಅಧಿಕ ಮೊತ್ತವನ್ನು ಫಲಾನುಭವಿಗಳ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗಿದೆ.
ಈ ವೇಳೆ ಪ್ರಧಾನ ಕಾರ್ಯದರ್ಶಿ ಡಾ. ಶಾಮ್ಲಾ ಇಕ್ಬಾಲ್, ನಿರ್ದೇಶಕ ಮಹೇಶ್ ಬಾಬು, ಆಪ್ತ ಕಾರ್ಯದರ್ಶಿ ಡಾ. ಟಿ.ಎಚ್. ವಿಶ್ವನಾಥ್, ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್, ಜಂಟಿ ನಿರ್ದೇಶಕರು ಪುಷ್ಪ ರಾಯರ್, ನಟರಾಜ್, ಎಂ.ಜಿ. ಪಾಲಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
MUST WATCH: TUMAKURU : ತುಮಕೂರಿನ ಮಂಗಳಮುಖಿಯರಿಗಿಲ್ಲ ಗೃಹಲಕ್ಷ್ಮಿ ಭಾಗ್ಯ..!




