Lokayukta Raid : ತಿಪಟೂರು ತಾಲ್ಲೂಕಿನಲ್ಲಿ ನಡೆದ ಕಾಮಗಾರಿಯೊಂದಕ್ಕೆ ಬಿಲ್ ಮಾಡಲು ಲಂಚ ಪಡೆಯುವ ವೇಳೆ ತಿಪಟೂರು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Lokayukta Raid : ತಿಪಟೂರು ತಾಲ್ಲೂಕಿನಲ್ಲಿ ನಡೆದ ಕಾಮಗಾರಿಯೊಂದಕ್ಕೆ ಸಂಬಂಧಿಸಿದ ಬಿಲ್ ಮಾಡಲು ಲಂಚ ಸ್ವೀಕರಿಸುತ್ತಿದ್ದ ತಿಪಟೂರು ತಾಲೂಕು ಪಂಚಾಯತ್ನ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಎಇಇ) ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಗುತ್ತಿಗೆದಾರನ ದೂರಿನಿಂದ ಬಯಲಾದ ಲಂಚ ಪ್ರಕರಣ
ಪ್ರಥಮ ದರ್ಜೆ ಗುತ್ತಿಗೆದಾರ ಸುನಿಲ್ ಅವರ ದೂರಿನ ಆಧಾರದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬಲೆಯೊಡ್ಡಿ ದಾಳಿ ನಡೆಸಿದರು. ದಾಳಿಯ ವೇಳೆ, ಬಿಲ್ ಪ್ರಕ್ರಿಯೆಗಾಗಿ ಲಂಚ ಪಡೆಯುತ್ತಿದ್ದ ಎಇಇ ಸ್ವಾಮಿಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನು ಓದಿ : ದೇಶಸೇವೆಗೆ ಇಲ್ಲಿದೆ ಸುವರ್ಣವಕಾಶ – ಸೇನೆಗೆ ಸೇರಲು PUC ಪಾಸ್ ಆಗಿದ್ದರೆ ಸಾಕು!

ತನಿಖೆ ಮುಂದುವರಿದಿದೆ
ವಶಕ್ಕೆ ಪಡೆದ ಅಧಿಕಾರಿಯ ವಿರುದ್ಧ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದು, ಲೋಕಾಯುಕ್ತ ಇನ್ಸ್ಪೆಕ್ಟರ್ ರಾಜು ಅವರ ನೇತೃತ್ವದ ತಂಡ ಸ್ಥಳ ಪರಿಶೀಲನೆ ನಡೆಸುತ್ತಿದೆ. ಲಂಚ ಸ್ವೀಕರಿಸಿದ ನಗದು ಮೊತ್ತ ಹಾಗೂ ಸಂಬಂಧಿತ ದಾಖಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಜನರಲ್ಲಿ ಆಕ್ರೋಶ
ಇನ್ನು ಸರ್ಕಾರಿ ಅಧಿಕಾರಿಗಳಿಂದ ನಡೆಯುತ್ತಿರುವ ಲಂಚದ ಘಟನೆಗೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಇದನ್ನು ನೋಡಿ : ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಸಾಧ್ಯವಿಲ್ಲ: ಮೋಹನ್ ಭಾಗವತ್ ಹೇಳಿಕೆಗೆ ಸಿಎಂ ಸಿದ್ಧರಾಮಯ್ಯ ತಿರುಗೇಟು




