
BENGALURU : ಮೈಸೂರು ದಸರಾ ಧಾರ್ಮಿಕ ಆಚರಣೆ ಅಲ್ಲ, ಇದು ನಾಡಹಬ್ಬ ಹಾಗೂ ಸಾಂಸ್ಕೃತಿಕ ಉತ್ಸವವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ವಾರ್ತಾಸೌಧದಲ್ಲಿ ನಡೆದ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿ ಕನ್ನಡ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿದ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರಿಗೆ ದಸರಾ ಉದ್ಘಾ ಟನೆಗೆ ಆಹ್ವಾನ ನೀಡಲಾಗಿದೆ. ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಇದನ್ನು ಸ್ವಾಗತಿಸುತ್ತೇನೆ ಎಂದರು.
ಸರ್ವಧರ್ಮಗಳ ಬಗ್ಗೆ ಸಹಿಷ್ಣುತೆ ಬೆಳೆಸಿಕೊಳ್ಳಬೇಕು. ನಮ್ಮಲ್ಲಿ ಸಹಬಾಳ್ವೆ ಇರಬೇಕು. ಸಮಾಜದಲ್ಲಿ ವೈವಿಧ್ಯತೆಯಲ್ಲಿ ಏಕತೆಯನ್ನು ನಿರ್ಮಾಣ ಮಾಡಬೇಕು. ಆಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜಾತಿ, ಧರ್ಮಗಳನ್ನು ಮೀರಿ ನಾಡಿನ ಸಮಸ್ತ ಜನರು ಕೂಡಿ ಸಂಭ್ರಮಿಸುವ ಹಬ್ಬವೆಂದು ನಾವು ಮೊದಲಿ ನಿಂದಲೂ ಹೇಳುತ್ತಾ ಬಂದಿದ್ದೆವು. ಆದರೂ, ಇದರ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಸಿ, ಸಮಾಜ ವನ್ನು ಒಡೆಯುವ ಪ್ರಯತ್ನ ಮಾಡಲಾಯಿತು. ಈಗ ಸುಪ್ರೀಂ ತೀರ್ಪಿನಿಂದ ನಮ್ಮ ಸರ್ಕಾರದ ನಿಲುವಿಗೆ ಮನ್ನಣೆ ದೊರೆತಿದೆ ಎಂದು ಭಾವಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.




