Chikkamagaluru Suicide : ಸ್ನೇಹಿತರ ಜೊತೆ ಮದ್ಯ ಸೇವಿಸಿ ಅಪ್ಪನಿಗೆ ಗೊತ್ತಾದ್ರೆ ಬೈಯುತ್ತಾರೆ ಅಂತ ಬಾಲಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಸ್ನೇಹಿತರ ಜೊತೆ ಮದ್ಯ ಸೇವಿಸಿ ಅಪ್ಪನಿಗೆ ಗೊತ್ತಾದ್ರೆ ಬೈಯುತ್ತಾರೆ ಅಂತ 13 ವರ್ಷದ ಬಾಲಕ ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲ್ಲೂಕಿನ ಬಾಳೆಹೊನ್ನೂರು ಸಮೀಪದ ಮೇಲ್ಪಾಲ್ ಗ್ರಾಮದಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ಶರಣ್ (13) ಎಂದು ಗುರುತಿಸಲಾಗಿದೆ.
ಮನೆ ಬಳಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ
ಶರಣ್ ಮೇಲ್ಪಾಲ್ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ. ಮೇಲ್ಪಾಲ್ ಗ್ರಾಮದಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಶರಣ್ ತನ್ನ ಸ್ನೇಹಿತರೊಂದಿಗೆ ಮದ್ಯ ಸೇವಿಸಿದ್ದಾನೆ. ಮದ್ಯ ಸೇವಿಸಿದ ಬಳಿಕ ಕುಡಿದಿರುವುದು ಅಪ್ಪನಿಗೆ ಗೊತ್ತಾದರೆ ಬೈಯುತ್ತಾರೆ ಎಂದು ಮನೆ ಬಳಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಇದನ್ನು ಓದಿ : ತಿಥಿ ಸಿನಿಮಾ ಖ್ಯಾತಿಯ Gadappa ಇನ್ನಿಲ್ಲ
ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲು
ಇನ್ನು ಪೋಷಕರು ಶರಣ್ ಅನ್ನು ತಕ್ಷಣ ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ಕರೆತಂದರೂ, ವೈದ್ಯಕೀಯ ಸಹಾಯದಲ್ಲಿಯೇ ಅವನು ಮೃತಪಟ್ಟಿದ್ದಾನೆ. ಪ್ರಕರಣವನ್ನು ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.
ಪೋಷಕರು ಮಕ್ಕಳ ಬಗ್ಗೆ ಸದಾ ಎಚ್ಚರಿಕೆ ವಹಿಸಬೇಕಾಗಿದೆ. ಮಕ್ಕಳು ಎಲ್ಲಿರುತ್ತಾರೆ. ಯಾರ ಜೊತೆ ಏನು ಮಾಡುತ್ತಿರುತ್ತಾರೆ ಇವೆಲ್ಲವನ್ನೂ ಪೋಷಕರು ಸೂಕ್ಷ್ಮವಾಗಿ ಗಮನಿಸಬೇಕಾಗಿದೆ.
ಇದನ್ನು ನೋಡಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದ ಜೋಡಿಗೆ ಬೆದರಿಕೆ- ಪ್ರಣಯ ಪಕ್ಷಿಗಳು ಆಮೇಲೆ ಏನ್ಮಾಡಿದ್ರು..?




