Kukke Subrahmanya : ನಟಿ ನಯನತಾರಾ ಅವರು ಪತಿ, ನಿರ್ದೇಶಕ ವಿಘ್ನೇಷ್ ಶಿವನ್ ಅವರೊಟ್ಟಿಗೆ ಕರ್ನಾಟಕದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ್ದರು.

Kukke Subrahmanya : ದಕ್ಷಿಣ ಭಾರತದಲ್ಲಿ ‘ಲೇಡಿ ಸೂಪರ್ ಸ್ಟಾರ್’ ಎಂದೇ ಖ್ಯಾತಿಯಾಗಿರುವ ನಟಿ ನಯನತಾರಾ ಅವರು ಇಂದು ತಮ್ಮ ಪತಿ, ನಿರ್ದೇಶಕ ವಿಘ್ನೇಶ್ ಶಿವನ್ ಅವರೊಟ್ಟಿಗೆ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದರು.
ಸರ್ಪ ಸಂಸ್ಕಾರ ಪೂಜೆ ನೆರವೇರಿಸಿದ ನಟಿ ನಯನತಾರಾ ದಂಪತಿ
ಈ ಸಂದರ್ಭದಲ್ಲಿ ನಯನತಾರಾ ದಂಪತಿಗಳು ದೇವಾಲಯದಲ್ಲಿ ಸರ್ಪ ಸಂಸ್ಕಾರ ಪೂಜೆಯನ್ನು ನೆರವೇರಿಸಿದರು. ದೇವಾಲಯದ ಪ್ರಮುಖ ಅರ್ಚಕರು ಪೂಜಾ ವಿಧಿಗಳನ್ನು ನೆರವೇರಿಸಿದರು.
ಇದನ್ನೂ ಓದಿ: ಕತ್ರಿನಾಗೆ ಸಿಕ್ತಾ ಕುಕ್ಕೆ ಸುಬ್ರಹ್ಮಣ್ಯನ ಆಶೀರ್ವಾದ? ಪೋಟೊ ಶೇರ್ ಮಾಡಿ ಗುಡ್ ನ್ಯೂಸ್!
ದಂಪತಿಗೆ ಶಾಲು ಹೊದಿಸಿ ಸನ್ಮಾನ
ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಅವರು ನಯನತಾರಾ ಮತ್ತು ವಿಘ್ನೇಶ್ ಶಿವನ್ ದಂಪತಿಗೆ ಕ್ಷೇತ್ರದ ಪರವಾಗಿ ಶಾಲು ಹೊದಿಸಿ ಸನ್ಮಾನ ಮಾಡಿದರು.
ದಕ್ಷಿಣದ ನಟಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪೂಜೆ — ಪೋಟೋ ಕ್ಲಿಕ್ಕಿಸಿಕೊಂಡ ಅಭಿಮಾನಿಗಳು
ಭಕ್ತರು ಹಾಗೂ ಅಭಿಮಾನಿಗಳು ನಟಿ ನಯನತಾರಾ ಅವರನ್ನು ದೇವಾಲಯದಲ್ಲಿ ಕಂಡು ಸಂತೋಷ ವ್ಯಕ್ತಪಡಿಸಿ, ಕೆಲವರು ಅವರೊಂದಿಗೆ ಫೋಟೋಗಳು ಸಹ ಕ್ಲಿಕ್ಕಿಸಿಕೊಂಡರು.

ಪರಭಾಷಾ ನಟ-ನಟಿಯರು ಇತ್ತೀಚೆಗೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ
ಇತ್ತೀಚಿನ ದಿನಗಳಲ್ಲಿ ಹಲವಾರು ಪರಭಾಷಾ ನಟ–ನಟಿಯರು ಕೂಡಾ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದಾರೆ. ಬಾಲಿವುಡ್ ನಟಿಯರಾದ ಕತ್ರಿನಾ ಕೈಫ್, ಶಿಲ್ಪಾ ಶೆಟ್ಟಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆಗಳನ್ನು ನೆರವೇರಿಸಿದ್ದಾರೆ.
ಹೆಸರಾಂತ ನಾಗಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯ
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಇರುವ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು ಭಾರತದ ಹೆಸರಾಂತ ನಾಗಕ್ಷೇತ್ರಗಳಲ್ಲಿ ಒಂದಾಗಿದೆ. ಸಿನಿಮಾ ತಾರೆಗಳು, ಕ್ರಿಕೆಟಿಗರು, ರಾಜಕಾರಣಿಗಳು ಸೇರಿದಂತೆ ಅನೇಕರು ಪ್ರತಿವರ್ಷ ಇಲ್ಲಿ ಬಂದು ಸರ್ಪಸಂಸ್ಕಾರ ಮತ್ತು ಅಶ್ಲೇಷಾ ಪೂಜೆಗಳನ್ನು ನೆರವೇರಿಸುತ್ತಾರೆ.
MUST WATCH: SIDDAGANGA MATA | ಸಿದ್ದಗಂಗಾ ಶ್ರೀಗಳ ಗದ್ದುಗೆ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್ ಕುಮಾರ್




