Mekedatu project : ಮೇಕೆದಾಟು ಯೋಜನೆ ಪ್ರಶ್ನಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನ ವಜಾಗೊಳಿಸಿದ ಸುಪ್ರೀಂ ಕೋರ್ಟ್, ಈ ಯೋಜನೆ ಇನ್ನೂ ಆರಂಭಿಕ ಹಂತದಲ್ಲಿದ್ದು, ಮಧ್ಯಪ್ರವೇಶ ಮಾಡುವುದಿಲ್ಲ ಎಂದ ಸುಪ್ರೀಂ ಕೋರ್ಟ್.

Mekedatu Project : ಮೇಕೆದಾಟು ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಪರವಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ತಮಿಳುನಾಡಿನ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್
ನೆರೆಯ ತಮಿಳುನಾಡು ಸರ್ಕಾರ ಈ ಯೋಜನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಗುರುವಾರ ವಜಾಗೊಳಿಸಿದ್ದು, ಕರ್ನಾಟಕ ಸರ್ಕಾರಕ್ಕೆ ಇದು ದೊಡ್ಡ ಜಯವಾಗಿದೆ.
ಮೇಕೆದಾಟು ಯೋಜನೆಗೆ ಹಸಿರು ನಿಶಾನೆ
ಕಳೆದ ಏಳು ವರ್ಷಗಳಿಂದ ತಮಿಳುನಾಡು ಮೇಕೆದಾಟು ಯೋಜನೆಗೆ ವಿರೋಧಿಸಿ ಕಾವೇರಿ ನೀರಿನ ಹಂಚಿಕೆಗೆ ಹಾನಿ ಆಗುತ್ತದೆ ಎಂಬ ಕಾರಣದಿಂದ ಸುಪ್ರೀಂ ಕೋರ್ಟ್ನಲ್ಲಿ ತಕರಾರು ಅರ್ಜಿ ಸಲ್ಲಿಸಿತ್ತು. ಆದರೆ, ಇದೀಗ ಆ ಅರ್ಜಿಯನ್ನು ತಿರಸ್ಕರಿಸಿರುವುದರಿಂದ ಕರ್ನಾಟಕಕ್ಕೆ ಹಸಿರು ನಿಶಾನೆ ಸಿಕ್ಕಂತಾಗಿದೆ.
ಇದನ್ನೂ ಓದಿ : A huge water resource project In Karnataka | ಸದ್ದಿಲ್ಲದೇ ರಾಜ್ಯದಲ್ಲಿ New project Start!
ಮೇಕೆದಾಟು ಯೋಜನೆ ಇನ್ನೂ ಆರಂಭಿಕ ಹಂತದಲ್ಲಿದೆ, ಮಧ್ಯಪ್ರವೇಶ ಬೇಡ
ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು, “ಮೇಕೆದಾಟು ಯೋಜನೆ ಇನ್ನೂ ಪ್ರಾರಂಭಿಕ ಹಂತದಲ್ಲಿದೆ, ಯಾವುದೇ ನಿರ್ಮಾಣ ಕಾರ್ಯ ಆರಂಭವಾಗಿಲ್ಲ. ಈ ಯೋಜನೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕೇಂದ್ರ ಜಲ ಆಯೋಗದ ಪರಿಶೀಲನೆಯಲ್ಲಿದೆ.
ಹೀಗಾಗಿ ನ್ಯಾಯಾಲಯ ಮಧ್ಯಪ್ರವೇಶಿಸುವ ಅಗತ್ಯವಿಲ್ಲ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಅಂಗೀಕರಿಸಿದ ಆದೇಶದ ಪ್ರಕಾರ ಕೇವಲ ವಿಸ್ತೃತ ಯೋಜನಾ ವರದಿ ತಯಾರಿಕೆ ಅಷ್ಟೇ ಆಗಿದೆ.

ಮೇಕೆದಾಟು ಯೋಜನೆ ವಿಚಾರದಲ್ಲಿ ತಮಿಳುನಾಡಿಗೆ ಶಾಕ್
ತಮಿಳುನಾಡಿನ ಆಕ್ಷೇಪಣೆಗಳನ್ನು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ ತಜ್ಞರು ಪರಿಗಣಿಸಿದ ನಂತರ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ.
ಸುಪ್ರೀಂ ಕೋರ್ಟ್ ತಮಿಳುನಾಡಿನ ಅರ್ಜಿಗೆ ತಿರಸ್ಕಾರ
ಡಿಪಿಆರ್ ಪರಿಗಣಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಗಳ ಪೂರ್ವಾನುಮೋದನೆಯು ಪೂರ್ವಾಪೇಕ್ಷಿತವಾಗಿರುತ್ತದೆ . ಆ ವಿಷಯದ ದೃಷ್ಟಿಯಿಂದ, ಪ್ರಸ್ತುತ ತಮಿಳುನಾಡಿನ ಅರ್ಜಿಯು ಅಪ್ರಸ್ತುತವಾಗಿದೆ ಎಂದು ನ್ಯಾಯಪೀಠ ಹೇಳಿದೆ
ಕರ್ನಾಟಕದ ನೀರಿನ ಹೋರಾಟಕ್ಕೆ ಹೊಸ ಚೈತನ್ಯ
ಈ ತೀರ್ಪಿನಿಂದ ಮೇಕೆದಾಟು ಯೋಜನೆಗೆ ಹೊಸ ಶಕ್ತಿ ಸಿಕ್ಕಿದ್ದು, ರಾಜ್ಯ ಸರ್ಕಾರ ಇದೀಗ ಕೇಂದ್ರದಿಂದ ಅಂತಿಮ ಅನುಮೋದನೆ ಪಡೆಯಲು ಸಜ್ಜಾಗಿದೆ.
MUST WATCH : ಎತ್ತಿನಹೊಳೆ ಯೋಜನೆ ಕಾಮಗಾರಿ ಸಿದ್ದರಾಮಯ್ಯ ಹೀಗ್ಯಾಕಂದ್ರು




