
ಸಾಂಧರ್ಭಿಕ ಚಿತ್ರ
DODDABALLAPURA : ಕೊಟ್ಟಿಗೆಯಲ್ಲಿದ್ದ 9 ಕುರಿಗಳ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲೇ ಮರಿ ಸೇರಿ 4 ಕುರಿಗಳು ಸಾವನ್ನಪ್ಪಿದ್ದು, 5 ಕುರಿಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ಇನ್ನು ಕುರಿಗಳು ರೈತ ಲಕ್ಷ್ಮಿನಾರಾಯಣಪ್ಪ ಎಂಬುವವರಿಗೆ ಸೇರಿದವು ಎನ್ನಲಾಗಿದೆ. ಕುರಿಗಳ ಮೇಲೆ ಚಿರತೆ ದಾಳಿ ನಡೆಸಿದ್ದರಿಂದ ರೈತನಿಗೆ ಸುಮಾರು 50 ಸಾವಿರಕ್ಕೂ ಹೆಚ್ಚು ನಷ್ಟ ಉಂಟಾಗಿದ್ದು, ರೈತ ಲಕ್ಷ್ಮಿನಾರಾಯಣಪ್ಪ ಸಂಕಷ್ಟದಲ್ಲಿದ್ದಾನೆ. ಈ ಭಾಗದಲ್ಲಿ ಹಲವು ಬಾರಿ ಚಿರತೆಯು ಜಾನುವಾರುಗಳ ಮೇಲೆ ದಾಳಿ ನಡೆಸುತ್ತಲೇ ಬಂದಿದ್ದು, ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಕೂಡಲೇ ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಸೆರೆಯಿಡಿದು, ರೈತರ ಕಷ್ಟಕ್ಕೆ ಸ್ಪಂದಿಸಬೇಕಿದೆ.




