
PAVAGADA NEWS : ಕಾಲೇಜಿಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಈಚರ್ ವಾಹನ ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲಿಯೇ ಓರ್ವ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಪಾವಗಡ ಪಟ್ಟಣದ ತುಮಕೂರು ರಸ್ತೆಯ, ಸ್ವಾಮೀಜಿ ಆಸ್ಪತ್ರೆ ಮುಂಭಾಗ ಶುಕ್ರವಾರ ಸಂಜೆ ನಡೆದಿದೆ.
ಪಟ್ಟಣದ ಸ್ವಾಮಿ ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ಪಿಯುಸಿಯ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ 16 ವರ್ಷದ ಪ್ರಕೃತಿ ಮೃತ ದುರ್ದೈವಿ. ಪ್ರಕೃತಿ ತನ್ನ ಸ್ನೇಹಿತರೊಂದಿಗೆ ಸ್ಕೂಟಿಯಲ್ಲಿ ತುಮಕೂರು ರಸ್ತೆ ಮೂಲಕ ಕಾಲೇಜಿಗೆ ತೆರುಳುತ್ತಿದ್ದರು. ಈ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ಈಚರ್ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿನಿ ಬಚಾವ್ ಆಗಿದ್ದು, ಪ್ರಕೃತಿ ಈಚರ್ ಚಕ್ರದ ಅಡಿಗೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಇನ್ನು ಘಟನೆಯ ಬಗ್ಗೆ ಮಾಹಿತಿ ಪಡೆದ ಪುರಸಭೆಯ ಸದಸ್ಯ ಮಹಮದ್ ಇಮ್ರಾನ್ ಆಗಮಿಸಿ, ಕಳೆದ ಹಲವು ವರ್ಷಗಳಿಂದ ಕೆಶಿಪ್ ರಸ್ತೆಯಲ್ಲಿ ಸ್ಪೀಡ್ ಬ್ರೇಕರ್ ಗಳನ್ನು ಅಳವಡಿಸಲು ತಹಸೀಲ್ದಾರ್ ಸೇರಿ ದಂತೆ, ವಿವಿಧ ಇಲಾಖೆಗಳಿಗೆ ಮನವಿ ಮಾಡಿ ಆಗ್ರಹಿಸಿದ್ದರು ಸಹ ಯಾವುದೇ ಪ್ರಯೋಜನ ಆಗಿಲ್ಲ. ಇದನ್ನು ಸೇರಿದಂತೆ ಹತ್ತಕ್ಕೂ ಅಧಿಕ ಜನ ಈ ರಸ್ತೆಯಲ್ಲಿ ಮೃತಪಟ್ಟಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ರು. ಜೊತೆಗೆ ಮುಂದಿನ ದಿನಗಳಲ್ಲಿ ಕಣಿವೆ ದೇವಸ್ಥಾನದಿಂದ, ನಾಗಲಮಡಿಕೆ ಕ್ರಾಸ್ ನ ವರೆಗೂ ಸ್ಪೀಡ್ ಬ್ರೇಕ ರ್ ಹಾಕುವ ಕ್ರಮಕ್ಕೆ ಮುಂದಾಗದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ರು.
ಈ ಅಪಘಾತವಾಗುತ್ತಿರುವುದರ ಕುರಿತು ಅನೇಕ ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಆದರೆ, ಕೆಶಿಪ್ ರಸ್ತೆಯಲ್ಲಿ ಸ್ಪೀಡ್ ಬ್ರೇಕರ್ ಗಳನ್ನು ಹಾಕಲು ಸಾಧ್ಯವಿಲ್ಲ ಎಂದು ಸಬೂಬುನ್ನು ಅಧಿಕಾರಿಗಳು ನೀಡುತ್ತಿದ್ದಾರೆ. ಕುಣಿಗಲ್ ನಿಂದ ಮಧುಗಿರಿ ವರೆಗೂ ಅನೇಕ ಹಂಸ್ ಗಳನ್ನು ಹಾಕಿದ್ದಾರೆ. ಆದರೆ, ಪಾವಗ ಡಕ್ಕೆ ವಿಶೇಷ ಕಾನೂನನ್ನು ಅಧಿಕಾರಿಗಳು ತಂದಿದ್ದಾರೆ. ಮಧುಗಿರಿಯ ಕೆರೆಗಳಪಾಳ್ಯ ಬಳಿಯೂ ಇದೇ ರೀತಿಯ ಅಪಘಾತವಾಗಿತ್ತು. ಆ ಸಂದರ್ಭದಲ್ಲಿ ಅಲ್ಲಿನ ಅಧಿಕಾರಿಗಳು ಎಚ್ಚೆತ್ತುಕೊಂಡು ಸ್ಪೀಡ್ ಬ್ರೇಕರ್ ಗಳನ್ನು ಹಾಕಿದ್ದರು. ಆದರೆ, ಇಲ್ಲಿನ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಬೇಜವಾಬ್ದಾರಿತನ ತೋರುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ರು.
ಸ್ಥಳಕ್ಕೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಆಗಮಿಸಿ ಪರಿಹಾರವನ್ನು ನೀಡುವು ದರ ಜೊತೆಗೆ ಮುಂದಾಗುವ ಅನಾಹುತಗಳನ್ನು ತಪ್ಪಿಸಬೇಕೆಂದು ಆಗ್ರಹಿಸಿದ್ದರು. ಜೊತೆಗೆ ಈ ಭಾಗದಲ್ಲಿ ಹೆಚ್ಚು ವಿದ್ಯಾಸಂಸ್ಥೆಗಳಿದ್ದು, ವಿದ್ಯಾರ್ಥಿಗಳ ಓಡಾಟ ಹೆಚ್ಚಾಗಿರುತ್ತದೆ. ಆದ್ದರಿಂದ ಅಧಿಕಾರಿಗಳು ಇದ ನ್ನು ಮನಗಂಡು ಇನ್ನು ಮುಂದಾದ್ರೂ, ಯಾವುದೇ ವಿದ್ಯಾರ್ಥಿಗಳ ಪ್ರಾಣಕ್ಕೆ ಹಾನಿಯಾಗದಂತೆ ಕ್ರಮ ವಹಿಸಬೇಕಾಗಿದೆ ಎಂದರು ಒತ್ತಾಯಿಸಿದರು. ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.




