Accident : ಕಾಂಕ್ರೀಟ್ ಮಿಕ್ಸರ್ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗದಗದಲ್ಲಿ ನಡೆದಿದೆ.

Accident : ಗದಗ–ಹೊನ್ನಾಳಿ ರಾಜ್ಯ ಹೆದ್ದಾರಿ–57ರಲ್ಲಿ ಭಾನುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಗದಗ ತಾಲೂಕಿನ ನಾಗಾವಿ ಗ್ರಾಮದ ನಿವಾಸಿಗಳಾದ 9 ವರ್ಷದ ಮನೋಜ್ ಕಮತರ ಹಾಗೂ 18 ವರ್ಷದ ಆನಂದ ವಾರದ ಮೃತ ದುರ್ದೈವಿಗಳಾಗಿದ್ದಾರೆ.
ಇದನ್ನು ಓದಿ : BBK 12 : ಸುದೀಪ್ ಅವರನ್ನೇ ಇಮಿಟೇಟ್ ಮಾಡಿದ ಗಿಲ್ಲಿ!
ಜಿಮ್ಸ್ ಆಸ್ಪತ್ರೆಯಿಂದ ಗ್ರಾಮಕ್ಕೆ ಹಿಂದಿರುಗುತ್ತಿದ್ದ ವೇಳೆ ಅಪಘಾತ
ಇನ್ನು ಈ ಅಪಘಾತವು ನಾಗಾವಿ ಸಮೀಪದ ಮಹಾತ್ಮ ಗಾಂಧಿ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ವಿಶ್ವವಿದ್ಯಾಲಯ (MGRDPR) ಗೇಟ್ ಬಳಿಯಲ್ಲಿ ಸಂಭವಿಸಿದೆ. ಗದಗ ಜಿಮ್ಸ್ ಆಸ್ಪತ್ರೆಯಿಂದ ಗ್ರಾಮಕ್ಕೆ ಹಿಂದಿರುಗುತ್ತಿದ್ದ ವೇಳೆ, ಬೈಕ್ ಅತಿವೇಗದಲ್ಲಿ Over Take ಮಾಡಲು ಯತ್ನಿಸಿದಾಗ ಎದುರು ಬರುತ್ತಿದ್ದ ಕಾಂಕ್ರೀಟ್ ಮಿಕ್ಸರ್ ವಾಹನಕ್ಕೆ ಡಿಕ್ಕಿ ಹೊಡೆಯಲಾಗಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಸ್ಥಳದಲ್ಲೇ ಪ್ರಾಣಬಿಟ್ಟ ಸವಾರರು
ಘಟನೆಯ ತೀವ್ರತೆಯಿಂದ ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯುವಕರ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ನೋಡಿ : Nelamangala | ರಿವರ್ಸ್ ತೆಗೆಯುವಾಗ ಕಾರು ಹರಿದು ಮಗು ದುರ್ಮರಣ




