Karnataka Weather Report : ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು

Karnataka Weather Report : ಭಾರತ ಹವಾಮಾನ ಇಲಾಖೆ (IMD) ನೀಡಿದ ಮಾಹಿತಿ ಪ್ರಕಾರ, ಉತ್ತರ ಕರ್ನಾಟಕದಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಮುಂದಿನ ಎರಡು ದಿನ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ತೀವ್ರ ಶೀತಗಾಳಿ ಬೀಸುವ ಸಾಧ್ಯತೆ ಇದೆ.
ಇದನ್ನು ನೋಡಿ : ಮಾಧ್ಯಮ ಮಿತ್ರರಿಗೆ ರಾಜಣ್ಣ ಗುಡ್ ನ್ಯೂಸ್ ಸಾರಿಗೆ ಸಚಿವರಿಗೆ ಏನೇಳಿದ್ರು ಗೊತ್ತಾ
ಮೋಡ ಕವಿದ ವಾತಾವರಣ
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಆಗಿರುವ ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 17°C ಇರಬಹುದು.
ಇಂದಿನ ಹವಾಮಾನ ಹೇಗಿರಲಿದೆ?
ಇಂದು (ನವೆಂಬರ್ 16) ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ. ಜನರಿಗೆ ತೀವ್ರ ಶೀತಗಾಳಿ, ಮೋಡಮಯ ಪರಿಸ್ಥಿತಿ ಮತ್ತು ಮಂಜು ಬಗ್ಗೆ ಎಚ್ಚರಿಕೆ ನೀಡಲಾಗಿದೆ.
ಇದನ್ನು ಓದಿ : SIRA : ಗೋದಿ ತುಂಬಿದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ – ಗೋದಿಗೆ ಮುಗಿಬಿದ್ದ ಜನರು




