Dharwad Police Officers Death : ಒಂದೇ ದಿನ ಇಬ್ಬರು ಪೊಲೀಸರು (Police) ಸಾವನ್ನಪ್ಪಿರುವ ದಾರುಣ ಘಟನೆ ಧಾರವಾಡದಲ್ಲಿ (Dharwad) ನಡೆದಿದೆ.

ಧಾರವಾಡ ಜಿಲ್ಲೆಯಲ್ಲಿ ಒಂದೇ ದಿನ ಇಬ್ಬರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದು, ಒಬ್ಬರು ಹೃದಯಾಘಾತದಿಂದ ಮತ್ತು ಮತ್ತೊಬ್ಬರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ASI ಚಂದ್ರಕಾಂತ ಹುಟಗಿ ಹೃದಯಾಘಾತದಿಂದ ನಿಧನ
ಧಾರವಾಡ ಜಿಲ್ಲೆಯ ಕಲಘಟಗಿ ಪೊಲೀಸ್ ಠಾಣೆಯ ಎಎಸ್ಐ ಚಂದ್ರಕಾಂತ ಹುಟಗಿ ಅವರು ಹೃದಯಾಘಾತದಿಂದ ಅಕಾಲಿಕವಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಪೋಲೀಸ್ ಠಾಣೆಯಿಂದ ಮನೆಗೆ ವಿಶ್ರಾಂತಿಗಾಗಿ ತೆರಳಿದ್ದ ವೇಳೆ ಅವರಿಗೆ ಹೃದಯಾಘಾತ ಉಂಟಾಗಿ, ಸ್ಥಳದಲ್ಲೇ ಸಾವನ್ನಪ್ಪಿದರೆಂಬ ಮಾಹಿತಿ ಲಭ್ಯವಾಗಿದೆ.
ಇದನ್ನು ಓದಿ : Bengaluru : ನಾಳೆಯಿಂದ ಬಸವನಗುಡಿ ಕಡಲೆಕಾಯಿ ಪರಿಷೆ ಆರಂಭ
ಹೆಡ್ ಕಾನ್ಸಟೇಬಲ್ ಭಜಂತ್ರಿ ಅನಾರೋಗ್ಯದಿಂದ ನಿಧನ
ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸಟೇಬಲ್ ಎನ್. ಬಿ. ಭಜಂತ್ರಿ ಅವರು ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾರೆ. ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಶೋಕ
ಇಬ್ಬರು ಪೊಲೀಸ್ ಸಿಬ್ಬಂದಿಯ ಆಕಸ್ಮಿಕ ನಿಧನದಿಂದ ಪೊಲೀಸ್ ಇಲಾಖೆ, ಹಿರಿಯ ಅಧಿಕಾರಿಗಳು ಮತ್ತು ಸಹೋದ್ಯೋಗಿಗಳು ಆಳವಾದ ದುಃಖ ವ್ಯಕ್ತಪಡಿಸಿದ್ದಾರೆ. ಧಾರವಾಡ ಪೊಲೀಸ್ ವಲಯದಲ್ಲಿ ಈ ಘಟನೆ ತೀವ್ರ ಶೋಕವನ್ನುಂಟು ಮಾಡಿದೆ.
ಇದನ್ನು ನೋಡಿ : ದಂಡ ವಿಧಿಸಿದ್ರು ಕಾಮಗಾರಿ ಶುರು – ಅಧಿಕಾರಿಗಳಿಂದ ಖಡಕ್ ಸೂಚನೆ




