Hassan Accident : ಕಾರು, ಖಾಸಗಿ ಬಸ್ ಮತ್ತು ಸ್ಕೂಟರ್ ಮಧ್ಯೆ ಸಂಭವಿಸಿದ ಸರಣಿ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಹಾಸನದಲ್ಲಿ ನಡೆದಿದೆ.

ಕಾರು, ಖಾಸಗಿ ಬಸ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ನೆನ್ನೆ ಸಂಜೆ ಹಿರೀಸಾವೆ ಬಳಿ ರಾಷ್ಟ್ರೀಯ ಹೆದ್ದಾರಿ–75ರ ಅಂಬೇಡ್ಕರ್ ವೃತ್ತದ ಸಮೀಪ ನಡೆದಿದೆ. ಮೃತರನ್ನು ಎಂ.ಸಿ. ದೇವರಾಜ್ (54), ಮಸಕನಳ್ಳಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ.
ಅಪಘಾತ ಹೇಗೆ ಸಂಭವಿಸಿತು..?
ನೆನ್ನೆ ಸಂಜೆ ಸುಮಾರು 7 ಗಂಟೆ ವೇಳೆಗೆ ಹಾಸನದಿಂದ ಬೆಂಗಳೂರಿನತ್ತ ಅತಿ ವೇಗದಲ್ಲಿ ಬರುತ್ತಿದ್ದ ಖಾಸಗಿ ಬಸ್ ಎದುರಿನಿಂದ ಸಾಗುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಬಳಿಕ ನಿಯಂತ್ರಣ ಕಳೆದುಕೊಂಡ ಬಸ್ ಸರ್ವಿಸ್ ರಸ್ತೆಗೆ ನುಗ್ಗಿ, ಅಲ್ಲಿ ಸಂಚರಿಸುತ್ತಿದ್ದ ದೇವರಾಜ್ ಅವರ ಸ್ಕೂಟರ್ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟ ದೇವರಾಜ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಇದನ್ನು ಓದಿ : Gold Price Today : ಚಿನ್ನದ ದರದಲ್ಲಿ ಮತ್ತೆ ಏರಿಕೆ
ಬಸ್ ಪ್ರಯಾಣಿಕರು ಇದ್ದಿದ್ದರೆ ಭೀಕರ ದುರಂತ
ಇನ್ನು ಘಟನೆಯ ಸಮಯದಲ್ಲಿ ಬಸ್ಸಿನಲ್ಲಿ ಚಾಲಕ ಮತ್ತು ನಿರ್ವಾಹಕರ ಹೊರತು ಬೇರೆ ಯಾವುದೇ ಪ್ರಯಾಣಿಕರಿರಲಿಲ್ಲ. ಇದರಿಂದ ದೊಡ್ಡ ಪ್ರಮಾಣದ ಅನಾಹುತ ತಪ್ಪಿದಂತಾಗಿದೆ. ಚಾಲಕ ಮತ್ತು ನಿರ್ವಾಹಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ದೇವರಾಜ್ ಮನೆಗೆ ಹಿಂತಿರುಗುವ ಮಾರ್ಗದಲ್ಲೇ ಅಪಘಾತ
ಮಸಕನಳ್ಳಿಯಲ್ಲಿರುವ ತಮ್ಮ ಮನೆಗೆ ಹಿಂದಿರುಗಲು ದೇವರಾಜ್ ಸರ್ವಿಸ್ ರಸ್ತೆಯಲ್ಲಿ ಸ್ಕೂಟರ್ನಲ್ಲಿ ಸಂಚರಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಪೊಲೀಸರು ಪ್ರಕರಣ ದಾಖಲು
ಇನ್ನು ಘಟನೆಯ ಕುರಿತು ಚನ್ನರಾಯಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
ಇದನ್ನು ನೋಡಿ : ಕೊಪ್ಪಳ : ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ




