Bus Accident : ಧರ್ಮಸ್ಥಳಕ್ಕೆ (Dharmasthala) ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ (KSRTC Bus) ಮಾರ್ಗ ಮಧ್ಯೆಯೇ ಪಲ್ಟಿಯಾಗಿದೆ.

Bus Accident : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಸೂಳೆಮೂರ್ಕಿ ಕ್ರಾಸ್ನಲ್ಲಿ ಬೆಳಿಗ್ಗೆ ಧರ್ಮಸ್ಥಳಕ್ಕೆ ತೆರಳುತ್ತಿದ್ದ KSRTC ಬಸ್ ಪಲ್ಟಿಯಾಗಿದೆ. ಬಾದಾಮಿಯಿಂದ ಧರ್ಮಸ್ಥಳದ ಮಂಜುನಾಥ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
Bus Accident : 29 ಪ್ರಯಾಣಿಕರಿಗೆ ಗಾಯ
ಇನ್ನು ಈ KSRTC ಬಸ್ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಸುಮಾರು 29 ಜನರಿಗೆ ಗಾಯಗಳಾಗಿದ್ದು, ಕೆಲವರಿಗೆ ಗಂಭೀರ ಸ್ಥಿತಿ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಬಸ್ ವೇಗವಾಗಿ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಸುತ್ತಮುತ್ತಲಿನ ಸಾರ್ವಜನಿಕರು ತಕ್ಷಣ ಕಾರ್ಯಾಚರಣೆ ನಡೆಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಬಸ್ನಿಂದ ಹೊರಗೆ ತೆಗೆದಿದ್ದಾರೆ.
ಇದನ್ನು ನೋಡಿ : ಪಾವಗಡದಲ್ಲಿ ದರೋಡೆಕೋರರ ಅಟ್ಟಹಾಸ ಸರಣಿಗಳ್ಳತನಕ್ಕೆ ಬೆಚ್ಚಿಬಿದ್ದ ತಾಲೂಕಿನ ಜನ
ತುರ್ತು ಚಿಕಿತ್ಸೆಗಾಗಿ ಹೊನ್ನಾವರ ಆಸ್ಪತ್ರೆಗೆ ದಾಖಲು
ಗಾಯಗೊಂಡವರಲ್ಲಿ ಮಹಿಳೆಯರು, ಮಕ್ಕಳು ಮತ್ತು ವೃದ್ಧರೂ ಸೇರಿದ್ದಾರೆ. ತಲೆಗೆ ಗಾಯ, ಕೈಕಾಲುಗಳಿಗೆ ಪೆಟ್ಟುಗಳು, ಮತ್ತು ಇತರ ಗಾಯಗಳಿರುವ ಪ್ರಯಾಣಿಕರನ್ನು ತುರ್ತು ಚಿಕಿತ್ಸೆಗಾಗಿ ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲು
ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಅಪಘಾತಕ್ಕೆ ಸಂಬಂಧಿಸಿದ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ KSRTC ಅಧಿಕಾರಿಗಳು ಭೆಟಿ ನೀಡಿ ಪರಿಶಿಲನೆ ನಡೆಸಿದ್ದಾರೆ. ಬಸ್ ಚಾಲಕ ಮತ್ತು ಕಂಡಕ್ಟರ್ ಸ್ಥಿತಿಯ ಬಗ್ಗೆ ಮಾಹಿತಿ ಸದ್ಯ ಲಭ್ಯವಿಲ್ಲ. ಅಪಘಾತದ ಹಿನ್ನೆಲೆಯಲ್ಲಿ ಕೆಲವು ಸಮಯ ಸಂಚಾರ ತಡೆರಹಿತವಾಗಿತ್ತು.
ಇದನ್ನು ಓದಿ : Ballari : ಕೇವಲ ಒಂದು ವರ್ಷದ ಹಿಂದಷ್ಟೇ ಮದುವೆ ಆಗಿದ್ದ ದಂಪತಿ ಆತ್ಮಹತ್ಯೆ




