Bengaluru Robbery : ದ್ವಿಚಕ್ರ ವಾಹನದಲ್ಲಿ ಬಂದ ಮೂವರು ವ್ಯಕ್ತಿಗಳು ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಹಲ್ಲೆ ಮಾಡಿ, ದರೋಡೆ ಮಾಡಿದ್ದಾರೆ.

ಬೆಂಗಳೂರಿನ ಶಾಂತಿನಗರದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಮೂವರು ವ್ಯಕ್ತಿಗಳು ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಹಲ್ಲೆ ಮಾಡಿ, ದರೋಡೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹ
ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸಂಸದ ಪಿಸಿ ಮೋಹನ್ ಕೂಡ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದು, ಬೆಂಗಳೂರು ನಗರ ಪೊಲೀಸರ ತಕ್ಷಣವೇ ಕೈಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನು ಓದಿ : Chamarajanagara : ನಾಯಿಗಳಿಗೆ ಆಹಾರವಾಗಬೇಕಿದ್ದ ಅಪರೂಪದ ಉಡ ರಕ್ಷಣೆ
ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಹಲ್ಲೆ
ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಮತ್ತೊಂದು ಸ್ಕೂಟಿಯಲ್ಲಿ ಬಂದ ಮೂವರು ಅಡ್ಡಗಟ್ಟಿದ್ದಾರೆ. ನಂತರ ಅವರ ಮೇಲೆ ಹಲ್ಲೆ ಮಾಡಿ ದರೋಡೆಗೆ ಯತ್ನಿಸಿರುವುದು ಕಂಡು ಬಂದಿದೆ. ವ್ಯಕ್ತಿಯ ಜೇಬನ್ನು ಪರಿಶೀಲಿಸುತ್ತಿರುವುದು ಕೂಡ ಕಾಣಿಸಿದೆ. ಸಂತ್ರಸ್ತ ತನ್ನನ್ನು ತಾನು ರಕ್ಷಿಸಿಕೊಳ್ಳಲು ಯತ್ನಿಸಿದ್ದಾರೆ.
ಅಷ್ಟರಲ್ಲಿ ಮೂರು ಆಗಂತುಕರ ಪೈಕಿ ಒಬ್ಬ ಕೋಲಿನಿಂದ ಹೊಡೆದಿದ್ದಾನೆ. ದರೋಡೆ ಮಾಡಿದ ನಂತರ ಹಾಗಂತಕರ ಗ್ಯಾಂಗ್ ಅಲ್ಲಿಂದ ಪರಾರಿಯಾಗಿರುವುದು ವಿಡಿಯೋದಲ್ಲಿದೆ.
ಇದನ್ನು ನೋಡಿ : ತುಮಕೂರಿಗರಿಗೆ GOOD NEWS ಕೊಟ್ಟ NAMMA METRO.. ಶೀಘ್ರದಲ್ಲೇ ನಗರಕ್ಕೆ METRO ENTRY




