
KALBURGI NEWS : ಕಲಬುರಗಿ ನಗರದ ಕುಷ್ಟರೋಗಿಗಳ ಕಾಲೋನಿಯಲ್ಲಿ ಚಾಂದ್ಸಾಬ್ ಎಂಬ ವ್ಯಕ್ತಿಯನ್ನು ಬೆತ್ತಲೆ ಮಾಡಿ ಕಟ್ಟಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಮೃತನನ್ನು ಚಾಂದ್ಸಾಬ್ ಎಂದು ಗುರುತಿಸಲಾಗಿದ್ದು, ಅವರು ತಮ್ಮ ನಿವಾಸದಲ್ಲಿ ಪರಿಚಿತರೊಂದಿಗೆ ಎಣ್ಣೆ ಪಾರ್ಟಿ ನಡೆಸುತ್ತಿದ್ದರು. ಪಾರ್ಟಿ ವೇಳೆ ನಡೆದ ಗಲಾಟೆಯು ಹತ್ಯೆಯವರೆಗೆ ತಿರುವು ಪಡೆದು ಆರೋ ಪಿಗಳು ಚಾಂದ್ಸಾಬ್ರನ್ನು ಅಮಾನವೀಯ ರೀತಿಯಲ್ಲಿ ಹೊಡೆದು ಕೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ಚಾಂದ್ಸಾಬ್ ಅವರ ಪತ್ನಿ ದೆಹಲಿಯಲ್ಲಿ ವಾಸಿಸುತ್ತಿದ್ದು, ಪತಿಯ ಸಾವಿನ ಸುದ್ದಿಯನ್ನು ತಿಳಿದು ಈಗ ಕಲಬುರಗಿಗೆ ಆಗಮಿಸುತ್ತಿದ್ದಾರೆ. ಇನ್ನು ಈ ಸಂಬಂಧ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.




