Karnataka Weather Report : ಇನ್ನೇನು ಚಳಿ ಶುರುವಾಯಿತು ಎನ್ನುವಷ್ಟರಲ್ಲಿ ಹವಾಮಾನ ಇಲಾಖೆ ಮತ್ತೆ ಮಳೆ ಬರುವ ಮುನ್ಸೂಚನೆ ನೀಡಿದೆ.

ಚಳಿಯಿಂದಾಗಿ ಹವಾಮಾನ ತಂಪಾಗಿದ್ದ ಹಿನ್ನೆಲೆ ರಾಜ್ಯ ಹವಾಮಾನ ಇಲಾಖೆ ಮುಂದಿನ ದಿನಗಳಲ್ಲಿ ಮಳೆಯಾಗುವ ಸಾಧ್ಯತೆಯಿರುವ ಬಗ್ಗೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯ ನೈಋತ್ಯ ಭಾಗ ಮತ್ತು ಶ್ರೀಲಂಕಾ ಕರಾವಳಿಯ ತೀರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ನವೆಂಬರ್ 18ರಿಂದ 22ರವರೆಗೆ ಹಗುರದಿಂದ ಮಧ್ಯಮ ಮಟ್ಟದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸಾಧಾರಣ ಮಳೆಯಾಗುವ ಜಿಲ್ಲೆಗಳು
ದಕ್ಷಿಣ ಒಳನಾಡು ಜಿಲ್ಲೆಗಳಾದ ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಹಾಗೂ ಹಾಸನ ಜಿಲ್ಲೆಗಳ ಕೆಲವೆಡೆ ನವೆಂಬರ್ 18ರಿಂದ ನವೆಂಬರ್ 22ರ ವರೆಗೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಿದೆ.
ಪ್ರಸ್ತುತ ವಾಯುಭಾರ ಕುಸಿತವು ಕೊಮೊರಿಯನ್ ಪ್ರದೇಶದ ಮೇಲೆ ಕೇಂದ್ರೀಕೃತವಾಗಿದೆ ಮತ್ತು ಮುಂದಿನ 24 ಗಂಟೆಗಳಲ್ಲಿ ಪಶ್ಚಿಮ ವಾಯುವ್ಯ ದಿಕ್ಕಿಗೆ ಚಲಿಸಬಹುದು.
ಇದರಿಂದ ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ರೂಪಗೊಳ್ಳುವ ಸಾಧ್ಯತೆ ಇದೆ.
ಇದನ್ನು ಓದಿ : ಚಲಿಸುತ್ತಿದ್ದ ಆಂಬ್ಯುಲೆನ್ಸ್ಗೆ ಬೆಂಕಿ – ನವಜಾತ ಶಿಶು ಸೇರಿ ನಾಲ್ವರು ಸಜೀವ ದಹನ
ಕೆಲಭಾಗಗಳಲ್ಲಿ ಭಾರಿ ಮಳೆ ಸಾಧ್ಯತೆ
ಶ್ರೀಲಂಕಾದ ಆಗ್ನೇಯ ಕರಾವಳಿ ಹಾಗೂ ನೈಋತ್ಯ ಬಂಗಾಳಕೊಲ್ಲಿಯ ಕೆಲಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ, ಇದರಿಂದ ತಮಿಳುನಾಡು ಮತ್ತು ಪುದುಚೇರಿ ಭಾಗಗಳಲ್ಲಿ ಕೂಡ ಮಳೆ ಸಾಧ್ಯತೆ ಇದೆ.
ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಕೆ
ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 18ರಿಂದ 22ರವರೆಗೆ ಒಣ ಹವೆಯೇ ಮುಂದುವರಿಯಲಿದೆ. ಈ ನಡುವೆ, ರಾತ್ರಿ ವೇಳೆಗೆ ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಉಷ್ಣಾಂಶ ಏರಿಕೆ ಸಂಭವಿಸಬಹುದು.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಹಾಗೂ ಹಗುರ ಮಳೆ ಅಥವಾ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಜಿಲ್ಲೆಗಳಲ್ಲಿ ಬಿಸಿಗಾಳಿ ಮುಂದುವರಿಯಲಿದೆ.
ಇದನ್ನು ನೋಡಿ : ರಾಜಣ್ಣಗೆ ಮತ್ತೆ ಸಚಿವ ಸ್ಥಾನ ವಿಚಾರ – ಸಾಸಲು ಸತೀಶ್ ಏನೇಳಿದ್ರು ಗೊತ್ತಾ?




