DC Visits Municipal Office : ಇ-ಸ್ವತ್ತು ದೂರುಗಳ ಹಿನ್ನೆಲೆ, ಡಿಸಿ ಶುಭ ಕಲ್ಯಾಣ್ ತುಮಕೂರು ಪಾಲಿಕೆ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇ-ಸ್ವತ್ತು ದಾಖಲೆಗಳ ವಿತರಣೆಗಳಲ್ಲಿ ನಡೆಯುತ್ತಿರುವ ವಿಳಂಬ ಮತ್ತು ಗೊಂದಲಗಳ ಕುರಿತು ಸಾರ್ವಜನಿಕರಿಂದ ದೂರುಗಳನ್ನು ಹಿನ್ನೆಲೆ, ಜಿಲ್ಲಾಧಿಕಾರಿ ಶುಭ ಕಲ್ಯಾಣ್ (Dc Shubha Kalyan) ಅವರು ತುಮಕೂರು ಮಹಾನಗರ ಪಾಲಿಕೆ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಿಂಗಳುಗಟ್ಟಲೆ ಕಾಯಬೇಕಾದ ಪರಿಸ್ಥಿತಿ
ಪಾಲಿಕೆಯ ಆಸ್ತಿ ದಾಖಲೆ ವಿಭಾಗದಲ್ಲಿ ಆನ್ಲೈನ್ ಮೂಲಕ ಸಲ್ಲಿಕೆಯಾಗಿರುವ ಅನೇಕ ಅರ್ಜಿಗಳು ಕಂದಾಯ ನಿರೀಕ್ಷಕರ ಹಂತದಲ್ಲೇ ದೊಡ್ಡ ಪ್ರಮಾಣದಲ್ಲಿ ಬಾಕಿ ಉಳಿದಿರುವುದು, ದಾಖಲೆಗಳ ಪರಿಶೀಲನೆಗೆ ತಿಂಗಳುಗಟ್ಟಲೆ ಕಾಯಬೇಕಾದ ಪರಿಸ್ಥಿತಿ, ಜೊತೆಗೆ ಕೆಲ ಅಧಿಕಾರಿಗಳ ಅಸಮರ್ಪಕ ಸೇವಾ ನಿಲುವು ಜಿಲ್ಲಾಧಿಕಾರಿಗಳ ಕಣ್ಣಿಗೆ ಬಿದ್ದವು.
ಇದನ್ನು ಓದಿ : ಬೀದಿ ನಾಯಿ ದಾಳಿಯಿಂದ ವ್ಯಕ್ತಿ ಮೃತಪಟ್ಟರೆ 5 ಲಕ್ಷ ಪರಿಹಾರ – ರಾಜ್ಯ ಸರಕಾರ ಆದೇಶ

ಸಮಯಮಿತಿ ಒಳಗೆ ದಾಖಲೆಗಳನ್ನು ಪಡೆಯಲು ಸಾಧ್ಯವಾಗದೆ ದೊಡ್ಡ ಸಂಕಷ್ಟ
ಅಧಿಕಾರಿಗಳು ನೀಡಿದ ಅಂಕಿಅಂಶಗಳ ಪ್ರಕಾರ, ನೂರಾರು ಇ-ಸ್ವತ್ತು ಅರ್ಜಿಗಳು ಕಂದಾಯ ನಿರೀಕ್ಷಕರ ಮಟ್ಟದಲ್ಲಿ ಬಾಕಿ ಉಳಿದಿದ್ದು, ಸಾರ್ವಜನಿಕರು ಸಮಯಮಿತಿ ಒಳಗೆ ದಾಖಲೆಗಳನ್ನು ಪಡೆಯಲು ಸಾಧ್ಯವಾಗದೆ ದೊಡ್ಡ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ.

ಆಧಿಕಾರಿಗಳಿಗೆ ಖಡಕ್ ಎಚ್ಚರಿಕೆ
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅಧಿಕಾರಿಗಳ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, “ಸಾರ್ವಜನಿಕರನ್ನು ದಿನಗಟ್ಟಲೆ ಕಚೇರಿಗಳ ಸುತ್ತಲೂ ಓಡಾಡಿಸುವುದು ಅಧಿಕಾರಿಗಳ ನಿರ್ಲಕ್ಷ್ಯದ ಸಂಕೇತ. ಇದೇ ಪರಿಸ್ಥಿತಿ ಮುಂದುವರೆದರೆ ಸಂಬಂಧಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು”ಎಂದು ಖಡಕ್ ಎಚ್ಚರಿಕೆ ನೀಡಿದರು.

ಇದನ್ನು ನೋಡಿ : ZAIN SHAIKH FAYAZ ರ BIRTHDAY – ಜನ್ಮದಿನ ಹಿನ್ನಲೆ PARAMESHWAR ಆಶೀರ್ವಾದ




