Rishab Shetty Meets DK Shivakumar : ಭಾರತೀಯ ಚಿತ್ರರಂಗದ ಬ್ಲಾಕ್ಬಸ್ಟರ್ ‘ಕಾಂತಾರ ಚಾಪ್ಟರ್ 1’ ಚಿತ್ರದ ಸಾರಥಿ ರಿಷಬ್ ಶೆಟ್ಟಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಭಾರತೀಯ ಚಿತ್ರರಂಗದ ಬ್ಲಾಕ್ಬಸ್ಟರ್ ‘ಕಾಂತಾರ ಚಾಪ್ಟರ್ 1’ ಚಿತ್ರದ ನಾಯಕ ರಿಷಬ್ ಶೆಟ್ಟಿ (Actor Rishab Shetty) ಬುಧವಾರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (D.K Shivakumar) ಅವರನ್ನು ಭೇಟಿಯಾಗಿ ಚಿತ್ರರಂಗದ ಬೆಳವಣಿಗೆ ಕುರಿತು ಸಮಾಲೋಚನೆ ನಡೆಸಿದರು.
ರಿಷಬ್ ಶೆಟ್ಟಿಯ ಕಾರ್ಯವೈಖರಿ ಶ್ಲಾಘನೀಯ
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಅಧಿಕೃತ ಖಾತೆಯಲ್ಲಿ ಭೇಟಿಯ ಫೋಟೋ ಹಂಚಿಕೊಂಡಿದ್ದು, ನಟನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ರಿಷಬ್ ಶೆಟ್ಟಿ ಇಂದು ನನ್ನ ಗೃಹಕಚೇರಿಯಲ್ಲಿ ಭೇಟಿ ನೀಡಿ ಸಮಾಲೋಚನೆ ನಡೆಸಿದರು. ‘ಕಾಂತಾರ: ಒಂದು ದಂತಕಥೆ – ಅಧ್ಯಾಯ 1’ ಚಿತ್ರ ಯಶಸ್ವಿಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದೆ.

ಇದನ್ನು ಓದಿ : Belagavi : ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿಗೆ ಕಾರಣ ತಿಳಿಸಿದ DCF
ನಮ್ಮ ನೆಲಮೂಲದ ಆಚಾರ-ವಿಚಾರ, ಸಂಪ್ರದಾಯ, ಸಂಸ್ಕೃತಿಯನ್ನು ಇಡೀ ಪ್ರಪಂಚಕ್ಕೆ ಪರಿಚಯಿಸಿರುವ ರಿಷಬ್ ಶೆಟ್ಟಿಯ ಕಾರ್ಯವೈಖರಿ ಶ್ಲಾಘನೀಯ. ಮುಂದಿನ ಅವರ ಚಿತ್ರರಂಗದ ಪಯಣಕ್ಕೆ ಒಳ್ಳೆಯದಾಗಲಿ, ಇನ್ನೂ ಎತ್ತರಕ್ಕೆ ಅವರು ಬೆಳೆಯಲಿ ಎಂದು ಶುಭಹಾರೈಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.
ಉಪಮುಖ್ಯಮಂತ್ರಿಗಳ ಮೆಚ್ಚುಗೆ
ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರ ಕಾರ್ಯವೈಖರಿಗೆ ಉಪಮುಖ್ಯಮಂತ್ರಿ D.K ಶಿವಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನು ನೋಡಿ : ಗೊಂದಲಗಳ ನಡುವೆಯೂ ಉದ್ಘಾಟನೆಗೆ ಸಿದ್ಧವಾಯ್ತು ಹೈಟೆಕ್ ರೇಷ್ಮೆ ಮಾರುಕಟ್ಟೆ




