Political News : ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಚರ್ಚೆ ದಿನದಿಂದ ದಿನಕ್ಕೆ ದೊಡ್ಡ ಸಂಚಲವನನು ಸೃಷ್ಟಿ ಮಾಡ್ತಿದೆ.

ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಚರ್ಚೆ ದಿನದಿಂದ ದಿನಕ್ಕೆ ದೊಡ್ಡ ಸಂಚಲವನನು ಸೃಷ್ಟಿ ಮಾಡ್ತಿದೆ. ರಾಜ್ಯ ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣಗೊಂಡ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ಗೆ ಸಿಎಂ ಪಟ್ಟ ನೀಡಬೇಕೆಂಬ ಕೂಗು ಡಿಕೆಶಿ ಆಪ್ತ ವಲಯದಲ್ಲಿ ಕೇಳಿ ಬಂದಿದೆ. ಇತ್ತ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕೆಂದು ಆಗ್ರಹಿಸಿ ಒಕ್ಕಲಿಗ ಸಚಿವರು ಹಾಗೂ ಶಾಸಕರು ದೆಹಲಿ ದಂಡಯಾತ್ರೆ ಕೈಗೊಂಡಿದ್ದಾರೆ.
ಡಿಕೆಶಿ ಪರವಾಗಿ ಬ್ಯಾಟಿಂಗ್
ಇಷ್ಟು ದಿನಗಳ ಕಾಲ ಸೈಲೆಂಟ್ ಆಗಿಯೇ ಇದ್ದ ಒಕ್ಕಲಿಗ ಸಮುದಾಯದ ಕಾಂಗ್ರೆಸ್ ಶಾಸಕರು ಹಾಗೂ ಸಚಿವರ ಇದೀಗ ಅದ್ಯಾಕೋ ಡಿಕೆಶಿ ಮೇಲೆ ಲವ್ ಆಗಿ ಬಿಟ್ಟಿದ್ದು, ಈಗ ಪವರ್ ಗೇಮ್ನ ಅಖಾಡಕ್ಕೆ ಇಳಿದಿದ್ದಾರೆ. ಅಲ್ದೇ ಸಿಎಂ ಸ್ಥಾನವನ್ನು ಡಿಕೆಶಿಗೆ ನೀಡಬೇಕು ಎಂದು ಡಿಕೆಶಿ ಪರವಾಗಿ ಕೆಲವರು ಬ್ಯಾಟಿಂಗ್ ಮಾಡ್ತಾ ಇರೋದು ಅಚ್ಚರಿಗೆ ಕಾರಣವಾಗಿದೆ. ಅಲ್ದೇ ಡಿಕೆಶಿಗೆ ಸಿಎಂ ಪಟ್ಟ ನೀಡುವಂತೆ ಆಗ್ರಹಿಸಿ, ಕಾಂಗ್ರೆಸ್ ಹೈಕಮಾಂಡ್ನನ್ನು ಭೇಟಿ ನೀಡಿ ಡಿಕೆಶಿಗೆ ಡಿಸಿಎಂ ಪಟ್ಟ ನೀಡಲು ಮುಂದಾಗಿದ್ದಾರೆ.
ಇದನ್ನು ಓದಿ : Haveri|ಪತ್ನಿ, ಅತ್ತೆ-ಮಾವನ ಕಿರುಕುಳ – ವೀಡಿಯೋ ಮಾಡಿಟ್ಟು ಪತಿ ನೇಣಿಗೆ ಶರಣು
ದೆಹಲಿ ದಂಡಯಾತ್ರೆ
ಕೃಷಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಒಕ್ಕಲಿಗ ಸಮುದಾಯದ ಶಾಸಕರು ಹಾಗೂ ಸಚಿವರು ದೆಹಲಿ ದಂಡಯಾತ್ರೆ ಕೈಗೊಂಡಿದ್ದು, ಡಿಕೆಶಿ ಪರ ಬ್ಯಾಟಿಂಗ್ ಬೀಸಲಿದ್ದಾರೆ. ಚೆಲುವರಾಯಸ್ವಾಮಿ ನೇತೃತ್ವದಲ್ಲಿ ಮಾಗಡಿ ಶಾಸಕ ಬಾಲಕೃಷ್ಣ, ರಾಮನಗರ ಶಾಸಕ ಇಕ್ಬಾಲ್ ಕುಸೇನ್, ಮಂಡ್ಯ ಶಾಸಕ ರವಿ ಗಣಿಗ, ಆನೇಕಲ್ ಶಾಸಕ ಶಿವಣ್ಣ, ನೆಲಮಂಗಲ ಶಾಸಕ ಶ್ರೀನಿವಾಸ್, ಕುಣಿಗಲ್ ಶಾಸಕ ಡಾ.ರಂಗನಾಥ್, ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್, ಚನ್ನಗಿರಿ ಶಾಸಕ ಬಸವರಾಜು ಶಿವಗಂಗಾ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸದ್ದಿಲ್ಲದೇ ದೆಹಲಿಗೆ ಹಾರಿದ್ದಾರೆ ಎನ್ನಲಾಗಿದೆ.
ಹೈಕಮಾಂಡ್ ಡಿಕೆ ಟೀಂಗೆ ಬೆಂಬಲವಾಗಿ ನಿಲ್ತಾರಾ..?
ಇನ್ನು ರಾಜ್ಯ ಸರ್ಕಾರ ಅಧಿಕಾರದ ಗದ್ದುಗೆ ಏರಿ ಎರಡೂವರೆ ವರ್ಷ ಪೂರ್ಣಗೊಂಡ ದಿನವೇ ಕಾಂಗ್ರೆಸ್ ಪಕ್ಷದಲ್ಲಿ ಬಿರುಸಿನ ಬೆಳವಣಿಗೆ ಕಾಣುತ್ತಿವೆ. ಯಾರು ನಿರೀಕ್ಷಿಸದ ರೀತಿಯಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಶಾಸಕರು, ಸಾಚಿವರು ಡೆಲ್ಲಿ ಟೂರ್ ಕೈಗೊಳ್ಳುವ ಮೂಲಕ ಡಿಕೆಶಿ ಪರ ಅಖಾಡಕ್ಕೆ ಇಳಿದಿರೋದು ವಿಶೇಷವಾಗಿದೆ. ಒಟ್ನಲ್ಲಿ ಯಾರು ಊಹಿಸದ ರೀತಿಯಲ್ಲಿ ರಾಜ್ಯ ರಾಜಕಾರಣದಲ್ಲಿ ಬೆಳವಣಿಗೆ ಆಗ್ತಾ ಇದ್ದು, ಹೈಕಮಾಂಡ್ ಡಿಕೆ ಟೀಂಗೆ ಬೆಂಬಲವಾಗಿ ನಿಲ್ತಾರಾ..? ಇಲ್ವಾ ಎಂದು ಕಾದುನೋಡಬೇಕಿದೆ.
ಇದನ್ನು ನೋಡಿ : ಆಕಸ್ಮಿಕ ಬೆಂಕಿಗೆ ಗುಡಿಸಲು ಧಗಧಗ ನಗದು, ವಸ್ತುಗಳು ಸುಟ್ಟು ಕರಕಲು




