Bhatkal: ಹೋಮ್ ಸ್ಟೇ ಸ್ವಿಮ್ಮಿಂಗ್ ಪೂಲ್ಗೆ (Swimming pool) ಬಿದ್ದು ಮಗು ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದ ಜಾಲಿಯಲ್ಲಿ ನಡೆದಿದೆ.

Bhatkal: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಜಾಲಿ ಪ್ರದೇಶದಲ್ಲಿ ಹೋಮ್ಸ್ಟೇ ಈಜುಕೊಳಕ್ಕೆ ಬಿದ್ದು ಐದು ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಹೋಮ್ಸ್ಟೇ ಪೂಲ್ ದುರಂತ
ಮೃತ ಬಾಲಕನನ್ನು ಭಟ್ಕಳದ ಮೌಲವಿ ಶಾಹಿದುಲ್ಲಾಹ ಅವರ ಪುತ್ರ ಮೊಹಮ್ಮದ್ ಮುಸ್ತಾಕೀಮ್ ಶೇಖ್ (5) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: KARWAR : ಪ್ರವಾಸ ಹೋಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರು ಪಾಲು!
ಭಟ್ಕಳದ ಜಾಲಿಯಲ್ಲಿ ದುರಂತ: ಈಜುಕೊಳಕ್ಕೆ ಬಿದ್ದು ಮಗು ಸಾವನ್ನಪ್ಪಿದ ಘಟನೆ
ಕುಟುಂಬದವರ ಜೊತೆ ಆಟವಾಡುತ್ತಿದ್ದ ವೇಳೆ ಬಾಲಕ ಕಾಲು ಜಾರಿ ಈಜುಕೊಳಕ್ಕೆ ಬಿದ್ದಿದ್ದು, ಪರಿಣಾಮ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಶಾಹಿದುಲ್ಲಾಹ ಅವರು ಹೋಮ್ಸ್ಟೇ ಮನೆಯನ್ನು ಲೀಸ್ಗೆ ಪಡೆದಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ.

ಘಟನೆ ಸಂಬಂಧ ಭಟ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
MUST WATCH: ಈಜಲು ಹೋಗಿದ್ದವ ದುರಂತ ಅಂತ್ಯ ನೀರಿನಲ್ಲಿ ಮುಳುಗಿ ಯುವಕ ಸಾವು | MADHUGIRI NEWS |




