Karnataka Politics: ಪವರ್ ಶೇರಿಂಗ್ ಜಟಾಪಟಿ ನಡುವೆಯೇ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಒಟ್ಟಿಗೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

Karnataka Politics: ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಜಟಾಪಟಿ ನಡುವೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಮತ್ಸ್ಯಮೇಳದಲ್ಲಿ ಜೊತೆಯಾಗಿ ಕಾಣಿಸಿಕೊಂಡ ಸಿಎಂ-ಡಿಸಿಎಂ
ವಿಶ್ವ ಮೀನುಗಾರಿಕೆ ದಿನಾಚರಣೆ ಹಿನ್ನೆಲೆ ಹೆಬ್ಬಾಳದ ಪಶುವೈದ್ಯಕೀಯ ಮಹಾವಿದ್ಯಾಲಯ ಆವರಣದಲ್ಲಿ ನಡೆದ ಮತ್ಸ್ಯಮೇಳ ಕಾರ್ಯಕ್ರಮಕ್ಕೆ ಇಬ್ಬರೂ ನಾಯಕರು ಒಟ್ಟಿಗೆ ಆಗಮಿಸಿದರು.
ಕಾರ್ಯಕ್ರಮದ ನಂತರ ಮೇಳದಲ್ಲಿರುವ ಸ್ಟಾಲ್ಗಳನ್ನು ಕೂಡಾ ಇಬ್ಬರೂ ಜೊತೆಗೂಡಿ ವೀಕ್ಷಿಸಿದರು. ವೇದಿಕೆಯಲ್ಲಿ ಅಕ್ಕಪಕ್ಕ ಕುಳಿತು ಗುಸುಗುಸು ಮಾತುಕತೆ ನಡೆಸಿರುವುದು ಗಮನ ಸೆಳೆದಿದೆ.
ಕಾಂಗ್ರೆಸ್ನಲ್ಲಿ ಬಣಬೇಧ ತೀವ್ರಗೊಂಡಿರುವ ಸಮಯದಲ್ಲೇ ‘ಒಟ್ಟಿಗೆ’
ರಾಜ್ಯ ಕಾಂಗ್ರೆಸ್ನಲ್ಲಿ ಇತ್ತೀಚೆಗೆ ಹಂಚಿಕೆ ವಿವಾದ ಹೆಚ್ಚಾಗಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಬಣಗಳು ಪರಸ್ಪರ ವಿರುದ್ಧವಾಗಿ ಕಂಡುಬರುತ್ತಿವೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂಬ ಬೇಡಿಕೆ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ದೆಹಲಿ ಪರೇಡ್ ನಡೆಸಿದ ವಿಷಯವೂ ರಾಜಕೀಯ ಚರ್ಚೆಗೆ ಗ್ರಾಸವಾಗಿತ್ತು.
ಇದೆ ವೇಳೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಬ್ರದರ್ಸ್ ಪ್ರತ್ಯೇಕವಾಗಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ನೀಡಿ ಮಾತುಕತೆ ನಡೆಸಿರುವುದು ರಾಜಕೀಯ ತಾಪಮಾನ ಹೆಚ್ಚಿಸಿದೆ.
ಇದನ್ನೂ ಓದಿ : ರಾಜ್ಯ ಸಚಿವ ಸಂಪುಟದಲ್ಲಿ ಮೇಜರ್ ಸರ್ಜರಿ- ಹೈಕಮಾಂಡ್ ಗ್ರೀನ್ ಸಿಗ್ನಲ್
ಹೈಕಮಾಂಡ್ನ ಸ್ಪಷ್ಟ ಸಂದೇಶ?
ನಾಯಕತ್ವ ವಿಚಾರ ಸಂಸತ್ ಅಧಿವೇಶನದ ಸಂದರ್ಭದಲ್ಲಿ ಚರ್ಚೆಯಾಗುವರೆಗೂ ಸಂಪುಟ ಪುನಾರಚನೆ ಸಾಧ್ಯವಿಲ್ಲ ಎಂಬ ಸೂಚನೆ ಹೈಕಮಾಂಡ್ನಿಂದ ಬಂದಿದೆ ಎನ್ನಲಾಗ್ತಿದೆ. ಅಲ್ದೇ ಡಿಕೆ ಸಹೋದರರಿಗೆ ಸಮಾಧಾನದಿಂದ ಇರಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದ್ದಾರೆ ಎನ್ನಲಾಗ್ತಿದೆ.
ಒಟ್ಟಿಗೆ ಕಾಣಿಸಿಕೊಂಡ ದೃಶ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣ
ಸದ್ಯದ ರಾಜಕೀಯ ಗುದ್ದಾಟದ ನಡುವೆ ಇಬ್ಬರು ನಾಯಕರು ಒಂದೇ ವೇದಿಕೆಯ ಮೇಲೆ ಕಾಣಿಸಿಕೊಂಡಿರುವುದು ರಾಜಕೀಯ ವಲಯದಲ್ಲಿ ಮೂಡಿದೆ.
MUST WATCH: ಪರಪ್ಪನ ಅಗ್ರಹಾರ ಜೈಲಿಗೆ ಡಿಕೆಶಿ ವಿಸಿಟ್ ಯಾರನ್ನ ಮೀಟ್ ಮಾಡಲು ಬಂದ್ರು ಗೊತ್ತಾ




