Weather Report : ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಈಶಾನ್ಯ ಮಾನ್ಸೂನ್ ಶನಿವಾರ ಸಾಮಾನ್ಯವಾಗಿತ್ತು. ಇದರಿಂದ ದಕ್ಷಿಣ ಕನ್ನಡ, ಹಾಸನ, ಕೊಡಗು ಸೇರಿ ವಿವಿಧ ಜಿಲ್ಲೆಗಳ ಕೆಲ ಸ್ಥಳಗಳಲ್ಲಿ ಮಳೆಯಾಗಿದೆ.

ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಶನಿವಾರ ಈಶಾನ್ಯ ಮಾನ್ಸೂನ್ ಸಾಮಾನ್ಯವಾಗಿದ್ದು, ದಕ್ಷಿಣ ಕನ್ನಡ, ಹಾಸನ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳ ಕೆಲವು ಇಂದು ಭಾಗಗಳಲ್ಲಿ ಮಳೆಯಾಗಿದೆ.
ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಬೆಳಗಿನ ಜಾವ ಕೆಲವು ಕಡೆಗಳಲ್ಲಿ ಮಂಜು ಬೀಳುವ ಸಾಧ್ಯತೆಯೂ ಹವಾಮಾನ ಇಲಾಖೆ ತಿಳಿಸಿದೆ.
ನಗರದಲ್ಲಿ ಗರಿಷ್ಠ ತಾಪಮಾನ ಸುಮಾರು 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರುವ ನಿರೀಕ್ಷೆ ವ್ಯಕ್ತವಾಗಿದೆ.
ಇದನ್ನು ನೋಡಿ : ಕೆರೆ ಏರಿಗೆ ಸೇಫ್ ಗಾರ್ಡ್ ಧ್ವಂಸ ಗುತ್ತಿಗಾರರ ನಿರ್ಲಕ್ಷ್ಯಕ್ಕೆ ಆಕ್ರೋಶ
ನಾಳೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ.
ಇನ್ನು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.
ಇದನ್ನು ಓದಿ : ಸ್ಮೃತಿ ಮಂಧಾನ ಮದುವೆ ಮುಂದೂಡಿಕೆ ತಂದೆಗೆ ಹೃದಯಾಘಾತ




