Nursing Students Death : ಬೆಂಗಳೂರಿನ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ದಾರುಣ ಘಟನೆಯೊಂದು ನಡೆದಿದೆ.

ಬೆಂಗಳೂರು ನಗರದ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ದಾರುಣ ಘಟನೆಯೊಂದು ನಡೆದಿದೆ. ವಂದೇ ಭಾರತ್ ಹೈಸ್ಪೀಡ್ ರೈಲಿಗೆ (Vande Bharath Train) ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು (Narsing Students) ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
BSC ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು ವಿದ್ಯಾರ್ಥಿಗಳು
ಮೃತರನ್ನು ಕೇರಳ ಮೂಲದ ಸ್ಟೆರ್ಲಿನ್ ಎಲಿಜ ಶಾಜಿ (19) ಮತ್ತು ಜಸ್ಟಿನ್ ಜೋಸೆಫ್ (20) ಎಂದು ಗುರುತಿಸಲಾಗಿದೆ. ಇಬ್ಬರೂ ನಗರದಲ್ಲಿರುವ ಸಪ್ತಗಿರಿ ಕಾಲೇಜಿನಲ್ಲಿ ಪ್ರಥಮ ವರ್ಷದ BSC ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು.
ಇದನ್ನು ಓದಿ : Karnataka Weather Report : ನಾಳೆ ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಹೈಸ್ಪೀಡ್ ರೈಲಿಗೆ ಸಿಲುಕಿ ಸಾವು
ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದ್ರೆ ರೈಲ್ವೆ ಪೊಲೀಸರ ಮಾಹಿತಿ ಪ್ರಕಾರ, ಇಬ್ಬರು ಪಿಜಿಗೆ ಟ್ರ್ಯಾಕ್ ಮೂಲಕ ಹೋಗಲು ಮುಂದಾಗಿದ್ದರು. ಈ ವೇಳೆ ಹೈಸ್ಪೀಡ್ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
UDR ಅಡಿಯಲ್ಲಿ ಪ್ರಕರಣ ದಾಖಲು
ಈ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ UDR (ಅಸಹಜ ಸಾವಿನ ವರದಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಮೃತ ವಿದ್ಯಾರ್ಥಿಗಳ ಪೋಷಕರು ಹಾಗೂ ಸ್ನೇಹಿತರಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಇನ್ನು ಮೃತದೇಹಗಳನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗಯಲ್ಲಿ ಇರಿಸಲಾಗಿದೆ.

ಇದನ್ನು ನೋಡಿ : ಪವರ್ ಶೇರಿಂಗ್ ಫೈಟ್ | ಸಿಎಂ, ಡಿಸಿಎಂ ಮನೆಯಲ್ಲಿ ಗರಿಗೆದರಿದ ರಾಜಕೀಯ – ಮತ್ತೆ ದಲಿತ ಸಿಎಂ ಕೂಗು ಮುನ್ನೆಲೆಗೆ




