Pavagada Suicide : ಪಾವಗಡ ಪಟ್ಟಣದ ಬೆಸ್ಕಾಂ ಕಚೇರಿ ಹಿಂಭಾಗದಲ್ಲಿರುವ ಹುಣಸೇಮರದ ಕೊಂಬೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.

ಪಾವಗಡ ಪಟ್ಟಣದ ಬೆಸ್ಕಾಂ ಕಚೇರಿ ಹಿಂಭಾಗದಲ್ಲಿರುವ ಹುಣಸೇಮರದ ಕೊಂಬೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದ್ದು, ಪಾವಗಡ ಪಟ್ಟಣದ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಇನ್ನು ಮೃತ ಯುವಕ 26 ವರ್ಷದ ಚಂದನ್ ಕುಮಾರ್ ಎಂದು ತಿಳಿದುಬಂದಿದೆ.
ಇದನ್ನು ಓದಿ : ವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು
26 ವರ್ಷದ ಚಂದನ್ ಕುಮಾರ್ ಮೃತ ಯುವಕ
ಇನ್ನು ಮೃತ ಯುವಕ ಚಂದನ್ ಕುಮಾರ್ ನರಸಿಂಹ ಮೂರ್ತಿ ಎಂಬುವರ ಮಗನಾಗಿದ್ದು, ತುಮಕೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಚಂದನ್ ಕುಮಾರ್ ತುಮಕೂರಿನಿಂದ ಅಕ್ಕನ ಮನೆಗೆ ಬಂದಿದ್ದಾಗ ಈ ಘಟನೆ ನಡೆದಿದೆ. ಸದ್ಯ ಘಟನೆ ನಡೆದಾಗ ಮನೆಯವರೆಲ್ಲ ದೇವಸ್ಥಾನಕ್ಕೆ ತೆರಳಿದ್ದು, ಮನೆಯಲ್ಲಿ ಯಾರೂ ಇರಲಿಲ್ಲ ಎಂದು ತಿಳಿದುಬಂದಿದೆ.
ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಸದ್ಯ ವಿಷಯ ತಿಳಿದು ಪಾವಗಡ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಇದನ್ನು ನೋಡಿ : ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ- ಹೀಗ್ಯಾಕಂದ್ರು ಸಚಿವ ಸೋಮಣ್ಣ..?




