New Delhi : ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಸೂರ್ಯಕಾಂತ್ ಪ್ರಮಾಣ ವಚನ ಸ್ವೀಕರಿಸಿದರು.

ಜಮ್ಮು ಮತ್ತು ಕಾಶ್ಮೀರದ ವಿಶೇಷ ಹಕ್ಕುಗಳನ್ನು ಶಿಥಿಲಗೊಳಿಸುತ್ತಿದ್ದ ಧಾರಾ 370 ಹಕ್ಕನ್ನು ರದ್ದುಗೊಳಿಸುವಂತಹ ಮಹತ್ವದ ತೀರ್ಪುಗಳಲ್ಲಿ ಪ್ರಮುಖ ಪಾತ್ರ ವಹಿಸಿರುವ ನ್ಯಾಯಮೂರ್ತಿ ಸೂರ್ಯಕಾಂತ್, ಸೋಮವಾರ ಭಾರತದ 53ನೇ ಮುಖ್ಯ ನ್ಯಾಯಮೂರ್ತಿ ಆಗಿ ಪ್ರಮಾಣ ವಚನ ಸ್ವೀಕರಿಸಿದರು.
ಬಿಆರ್ ಗವಾಯಿ ನಿವೃತ್ತ
ಹಿಂದಿನ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರು ನವೆಂಬರ್ 23ರಂದು ನಿವೃತ್ತರಾದರು. ಅವರ ನಂತರ ಸೂರ್ಯಕಾಂತ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ಇದನ್ನು ಓದಿ : Belagavi| ಮೂರು ಮಕ್ಕಳ ತಂದೆ ಜೊತೆ 19ರ ಯುವತಿ ಎಸ್ಕೇಪ್

ಪ್ರಮಾಣ ವಚನ ಸ್ವೀಕಾರ
ರಾಷ್ಟ್ರಪತಿ ಭವನದಲ್ಲಿ ನಡೆದ ಸಣ್ಣ ಸಮಾರಂಭದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಸೂರ್ಯಕಾಂತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ದೇವರ ಹೆಸರಲ್ಲಿ ಹುಡಿ ಪಹಣವಾಗಿ, ಸೂರ್ಯಕಾಂತ್ ಅವರು ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಫೆಬ್ರುವರಿ 9, 2027 ರಂದು ನಿವೃತ್ತಿ
ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ಮುಂದಿನ ಸುಪ್ರೀಂ ಕೋರ್ಟ್ನ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಅಕ್ಟೋಬರ್ 30 ರಂದು ನೇಮಕ ಮಾಡಲಾಯಿತು ಮತ್ತು ಅವರು ಸುಮಾರು 15 ತಿಂಗಳು ಈ ಹುದ್ದೆಯಲ್ಲಿ ಇರುತ್ತಾರೆ. ಅವರಿಗೆ ಫೆಬ್ರುವರಿ 9, 2027ರಂದು 65 ವರ್ಷ ತುಂಬುವ ಹಿನ್ನೆಲೆಯಲ್ಲಿ ಅಧಿಕಾರದಿಂದ ನಿವೃತ್ತರಾಗುತ್ತಾರೆ.
ಇನ್ನು ಈ ಸಮಾರಂಭದಲ್ಲಿ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್, ಪ್ರಧಾನಮಂತ್ರಿ ನರೇಂದ್ರ ಮೋದಿ, ಮತ್ತು ಅನೇಕ ಹಿರಿಯ ನಾಯಕರು ಭಾಗವಹಿಸಿದ್ದರು.

ಇದನ್ನು ನೋಡಿ : ನಿಮ್ ಮನೆಗೆ ಕಾಳಿಂಗ ಸರ್ಪ ಬಂತಾ? ಹಿಡಿಯೋಕೆ ಅರಣ್ಯ ಇಲಾಖೆನೇ ಮಾಡುತ್ತೆ ವ್ಯವಸ್ಥೆ! ಸರ್ಕಾರದಿಂದ ಮಹತ್ವದ ಕ್ರಮ




