
DAVANAGERE: ದಾವಣಗೆರೆ ಜಿಲ್ಲೆಯಲ್ಲಿ ನ್ಯಾಯಾಲಯದ ಒಳಗಡೆಯೇ ವೈವಾಹಿಕ ಸಂಬಂಧದ ಹಿನ್ನೆಲೆಯಲ್ಲಿ ಗಂಭೀರ ಘಟನೆ ನಡೆದಿದೆ. ಸದ್ಯ ಡಿವೋರ್ಸ್ (ಮದುವೆ ವಿಚ್ಛೇದನೆ) ಅರ್ಜಿ ವಿಚಾರಣೆಯ ಹಿನ್ನೆಲೆಯಲ್ಲಿ ಕೋರ್ಟ್ಗೆ ಹಾಜರಾಗಿದ್ದ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಚಾಕು ಇರಿದಿರುವ ಘಟನೆ ನಡೆದಿದೆ.
ಪದ್ಮಾವತಿ ಎಂಬ ಮಹಿಳೆಯನ್ನು ಆಕೆಯ ಪತಿ ಪ್ರವೀಣ್ ಕುಮಾರ್ ಎಂಬಾತ ಚಾಕು ಇರಿದು ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಡಿವೋರ್ಸ್ ಸಂಬಂಧ ನ್ಯಾಯಾಲಯದ ಒಳಗಡೆ ವಿಚಾರಣೆ ನಡೆಯುತ್ತಿದ್ದು, ಆರೋಪಿ ಏಕಾಏಕಿ ತನ್ನ ಪತ್ನಿಗೆ ಚಾಕು ಇರಿದಿದ್ದಾನೆ. ಇನ್ನು ಪದ್ಮಾವತಿ ಅವರನ್ನು ತಕ್ಷಣವೇ ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಈ ಪ್ರಕರಣದ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಪ್ರವೀಣ್ ಕುಮಾರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರೆಸುತ್ತಿದ್ದಾರೆ.




