Kolar Accident : ಚೆನ್ನೈ ಎಕ್ಸ್ಪ್ರೆಸ್ ಹೈವೇಯಲ್ಲಿ ಕೋಲಾರದ (Kolara) ಸಮೀಪ ಭೀಕರ ಅಪಘಾತ ಸಂಭವಿಸಿದ್ದು, 4 ಮಂದಿ ಸಾವನ್ನಪ್ಪಿದ್ದಾರೆ.

ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ಹೈವೆಯಲ್ಲಿರುವ ಕೋಲಾರದ ಸಮೀಪ ಮಧ್ಯರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಮಾಲೂರು ತಾಲ್ಲೂಕಿನ ಅಬ್ಬೇನಹಳ್ಫಿ ಬಳಿ ಕಾರು ರಸ್ತೆ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ಮೇಲಿಂದ ಕೆಳಗೆ ಬಿದ್ದಿದ್ದು, ಸಂಪೂರ್ಣ ಜಖಂಗೊಂಡಿದೆ.
ಇದನ್ನು ಓದಿ : 53ನೇ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಸೂರ್ಯಕಾಂತ್!
ಚಿಕಿತ್ಸೆ ಫಲಿಸದೇ 4 ಮಂದಿ ಆಸ್ಪತ್ರೆಯಲ್ಲಿ ಸಾವು
ಗೋಪಿ (38), ಗೌತಮ್ ರಮೇಶ್ (28), ಹರಿಹರನ್ (27), ಜಯಂಕರ್ (30) ಮೃತ ದುರ್ದೈವಿಗಳಾಗಿದ್ದಾರೆ. ಅಪಘಾತದ ಬಳಿಕ ಅವರನ್ನು ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಾಲ್ವರು ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಕಡೆಗೆ ತೆರಳುತ್ತಿದ್ದಾಗ ಅಪಘಾತ
ಇನ್ನು ಮೃತರು ಚೆನ್ನೈ ಮೂಲದವರು ಎಂದು ತಿಳಿದು ಬಂದಿದೆ. ತಮಿಳುನಾಡಿನಿಂದ ಬೆಂಗಳೂರಿನ ಕಡೆಗೆ ಬರುವಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಪ್ರಕರಣ ಸಂಬಂಧ ಮಾಲೂರು ಪೊಲೀಸ್ ಠಾಣೆಯಲ್ಲಿ ತನಿಖೆ ಆರಂಭಿಸಲಾಗಿದೆ.
ಇದನ್ನು ನೋಡಿ : ATTEMPT TO MUR*ER | ತಮ್ಮನ ಹೆಂಡ್ತಿಗೆ ಚಾಕುವಿನಿಂದ ಅಟ್ಯಾಕ್ ಮಾಡಿದ ನಾದಿನಿ




