Actor Ambareesh : ರೆಬೆಲ್ ಸ್ಟಾರ್ ಅಂಬರೀಶ್ ಅವರ 7ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ ಇಂದು ಕಂಠೀರವ ಸ್ಟುಡಿಯೋಗೆ ಆಗಮಿಸಿ ಅಂಬರೀಶ್ ಸಮಾಧಿಗೆ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ.

ರೆಬೆಲ್ ಸ್ಟಾರ್ ಅಂಬರೀಶ್ ಅವರ 7ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ ಇಂದು ಕಂಠೀರವ ಸ್ಟುಡಿಯೋಗೆ ಆಗಮಿಸಿ ಅಂಬರೀಶ್ ಸಮಾಧಿಗೆ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ.
ಇದನ್ನು ಓದಿ : Kolar|ಬೆಂಗಳೂರು- ಚೆನ್ನೈ ಹೈವೇಯಲ್ಲಿ ಕಾರು ಅಪಘಾತ – 4 ಮಂದಿ ಸಾವು
ಈ ಸಂದರ್ಭದಲ್ಲಿ ಅಭಿಮಾನಿಗಳು ಅನ್ನದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಅಖಿಲ ಭಾರತ ಡಾ. ಅಂಬರೀಶ್ ಅಭಿಮಾನಿಗಳ ಸಂಘದ ಉದ್ಘಾಟನೆಯನ್ನು ಸಹ ನೆರವೇರಿಸಲಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಹಿರಿಯ ನಟ ದೊಡ್ಡಣ್ಣ ಮತ್ತು ಅಭಿಷೇಕ್ ಅಂಬರೀಶ್ ಸಹ ಪೂಜೆಯಲ್ಲಿ ಭಾಗವಹಿಸಿದ್ದರು.
ಸಮಾರಂಭದಲ್ಲಿ ಸುಮಲತಾ ಅಂಬರೀಶ್ ಹಲವಾರು ವಿಚಾರಗಳ ಬಗ್ಗೆ ಮಾತನಾಡಿ, ಮೊಮ್ಮಗನೊಂದಿಗೆ ಕಳೆದ ಕಾಲದ ನೆನಪುಗಳು ಮತ್ತು ಅವರ ತೊದಲು ನುಡಿಗಳ ಬಗ್ಗೆ ಹಂಚಿಕೊಂಡಿದ್ದಾರೆ. ಸಕ್ರೀಯ ರಾಜಕಾರಣದಿಂದ ದೂರ ಇದ್ದರೂ, ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ತಿಳಿಸಿದರು.
ಇದನ್ನು ನೋಡಿ : ತಮಿಳುನಾಡು | ಖಾಸಗಿ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ – 6 ಮಂದಿ ದುರ್ಮರಣ, 28 ಮಂದಿಗೆ ಗಾಯ




