Actor Dharmendra Death : ದೀರ್ಘ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಿವುಡ್ನ ಹಿರಿಯ ನಟ, ಎವರ್ಗ್ರೀನ್ ಸ್ಟಾರ್, ಆಕ್ಷನ್ ಕಿಂಗ್ ಧರ್ಮೇಂದ್ರ ಅವರು 89ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ.

ದೀರ್ಘ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಿವುಡ್ನ ಹಿರಿಯ ನಟ, ಎವರ್ಗ್ರೀನ್ ಸ್ಟಾರ್ ಧರ್ಮೇಂದ್ರ (Actor Dharmendra) ಅವರು 89 ವರ್ಷದ ವಯಸ್ಸಿನಲ್ಲಿ ಮುಂಬೈನ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಮುಂದಿನ ಡಿಸೆಂಬರ್ 8 ರಂದು ಅವರು 90ನೇ ವಸಂತಕ್ಕೆ ಕಾಲಿಡಬೇಕಿತ್ತು.
ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಧರ್ಮೇಂದ್ರ
ಕೆಲವು ತಿಂಗಳುಗಳಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಧರ್ಮೇಂದ್ರ ಅವರನ್ನು ಕೆಲ ದಿನಗಳ ಹಿಂದೆ ಉಸಿರಾಟ ತೊಂದರೆಯಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಅವರ ಆರೋಗ್ಯ ವಿಚಾರಿಸಲು ಬಾಲಿವುಡ್ನ ಬಹಳಷ್ಟು ಗಣ್ಯರು ಭೇಟಿ ನೀಡಿದ್ದರು. ಸಲ್ಮಾನ್ ಖಾನ್, ಶಾರುಖ್ ಖಾನ್, ಗೋವಿಂದ್, ರಿತೇಶ್ ದೇಶ್ಮುಖ್, ಜೆನಿಲಿಯಾ ದೇಶ್ಮುಖ್, ಅಮೀಷಾ ಪಟೇಲ್ ಮುಂತಾದ ನಟರು ಧರ್ಮೇಂದ್ರ ಅವರನ್ನು ಭೇಟಿಯಾಗಿದ್ದರು.
ಇದನ್ನು ಓದಿ : Madhugiri Death|ಮಧುಗಿರಿ ಮಾಜಿ ಪುರಸಭೆ ಅಧ್ಯಕ್ಷರ ಅಣ್ಣನ ಮಗ ಸಾವು

ಆರೋಗ್ಯ ಚೇತರಿಕೆಯ ನಂತರ, ಕುಟುಂಬ ಸದಸ್ಯರು ಧರ್ಮೇಂದ್ರ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿ ಮನೆಯಲ್ಲಿಯೇ ಚಿಕಿತ್ಸೆ ಮುಂದುವರಿಸಲು ನಿರ್ಧರಿಸಿದ್ದರು.
300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ
ಧರ್ಮೇಂದ್ರ ಅವರು ಬಾಲಿವುಡ್ನಲ್ಲಿ 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿ, ʻಶೋಲೆʼ, ʻಚುಪ್ಕೆ ಚುಪ್ಕೆʼ, ʻಸೀತಾ ಔರ್ ಗೀತಾʼ ಸೇರಿದಂತೆ ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದರು. ಚಿತ್ರರಂಗದಲ್ಲಿ ಅವರು ಮಾಡಿದ ಕೊಡುಗೆ ಅಪಾರವಾಗಿದ್ದು, ಅವರು ಎಂದಿಗೂ ಮರೆಯಲಾಗದ ನಟರಾಗಿದ್ದಾರೆ.

ಇದನ್ನು ನೋಡಿ : ಪಾಕಿಸ್ತಾನದ ಅರೆಸೇನಾ ಪಡೆಯ ಪ್ರಧಾನ ಕಚೇರಿ ಮೇಲೆ ಭೀಕರ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 6 ಮಂದಿ ಸಾವು




