
KOLAR RAIN EFFECT : ರಾಜ್ಯದಲ್ಲಿ ಮಳೆಯ ಆರ್ಭಟ ಮತ್ತೆ ಮುಂದುವರೆದಿದ್ದು, ಕೆಲವು ಜಿಲ್ಲೆಗಳಲ್ಲಿ ಅವಾಂತರ ಸೃಷ್ಠಿ ಮಾಡಿದೆ. ಕೆಲವು ಗ್ರಾಮಗಳಲ್ಲಿ ಭಾರಿ ಮಳೆಗೆ ಹೊಲಗದ್ದೆಗಳು ಮುಳುಗಡೆಯಾಗಿವೆ. ಅತ್ತ ಕಷ್ಟಬಿದ್ದು ರೈತ ಬೆಳೆದಿದ್ದ ಬೆಳೆ ನಾಶವಾಗಿ ರೈತರು ಕಂಗಾಲಾಗಿದ್ದಾರೆ.

ಇತ್ತ ನಗರದ ಪ್ರದೇಶಗಳಲ್ಲಿಯೂ ಮಳೆಯ ಆರ್ಭಟ ಹೆಚ್ಚಾಗಿದ್ದು, ನಗರದಲ್ಲಿರುವ ಬೃಹತ್ ಮರಗಳು, ವಿದ್ಯುತ್ ಕಂಬಗಳು ಧರೆಗುರುಳುತ್ತಿವೆ. ಇತ್ತ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿಯೂ ನಿನ್ನ ರಾತ್ರಿ ಸುರಿದ ಭಾರಿ ಮಳೆಗೆ ನಗರದಲ್ಲಿ ಬೃಹತ್ ಮರ ಬಿದ್ದು, ದೊಡ್ಡ ಅವಾಂತರವೇ ಸೃಷ್ಠಿ ಯಾಗಿದೆ.

ಶ್ರೀನಿವಾಸಪುರ ಪಟ್ಟಣದ ನಂಬಿಹಳ್ಳಿ ಸರ್ಕಲ್ ನಲ್ಲಿ ಮಳೆಯ ಅಬ್ಬರಕ್ಕೆ ಬೃಹತ್ ಗಾತ್ರದ ಮರವೊಂದು ಬಿದ್ದಿದು, ಮರದಡಿ ನಿಲ್ಲಿಸಿದ್ದ ಒಂದು ಆಟೋ ಸಂಪೂರ್ಣ ಜಖಂಗೊಂಡಿದ್ದು, ನಾಲ್ಕು ವಿದ್ಯುತ್ ಕಂಬ ಗಳು ಮುರಿದು ಬಿದ್ದಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪುರಸಭೆ ಸಿಬ್ಬಂದಿಯಿಂದ ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.





