Davanagere : ಕಳೆದ ಎರಡು ದಿನಗಳಿಂದ ಕಾಣೆಯಾಗಿದ್ದ ಯುವಕರ ಶವ ದಾವಣಗೆರೆ ನಗರದ ಕುಂದುವಾಡ ಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.

Davanagere: ದಾವಣಗೆರೆ ನಗರದ ಕುಂದುವಾಡ ಕೆರೆಯಲ್ಲಿ ಇಬ್ಬರು ಯುವಕರ ಶವಗಳು ಇಂದು (ನವೆಂಬರ್ 25) ಅನುಮಾನಾಸ್ಪದವಾಗಿ ಪತ್ತೆಯಾಗಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಶಾಂತಿನಗರದ ನಿವಾಸಿಗಳಾದ ಚೇತನ್ (22) ಮತ್ತು ಮನು (23) ಮೃತ ದುರ್ದೈವಿಗಳಾಗಿದ್ದಾರೆ.
ಇದನ್ನೂ ಓದಿ: ನ್ಯಾಯಾಲಯದ ಆವರಣದಲ್ಲೇ ಪತ್ನಿಗೆ ಚಾಕು ಇರಿದ ಪತಿ..!
ಇನ್ನು ಇಬ್ಬರೂ ಯುವಕರು ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದು, ಕುಟುಂಬಸ್ಥರು ಇಂದು ಬೆಳಿಗ್ಗೆ ಹುಡುಕಾಟ ನಡೆಸಿದ ವೇಳೆ, ಕುಂದುವಾಡ ಕೆರೆಯಲ್ಲಿ ಇಬ್ಬರ ಶವಗಳು ಪತ್ತೆಯಾಗಿವೆ.
ಇನ್ನು ಯುವಕರು ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಬಿದ್ದರಾ? ಎಂಬ ಶಂಕೆ ವ್ಯಕ್ತವಾಗಿದ್ದು, ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ವಿದ್ಯಾನಗರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
MUST WATCH: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ- ಬೆಚ್ಚಿಬಿದ್ದ ಜನತೆ




