Fire Incident : ಹಾವೇರಿ ನಗರದ ಬಸ್ ನಿಲ್ದಾಣದ ಬಳಿ ಇರುವ ಮೊಬೈಲ್ ರಿಪೇರಿ ಅಂಗಡಿಯೊಂದರಲ್ಲಿ ಮಂಗಳವಾರ ರಾತ್ರಿ ಬೆಂಕಿ ಅವಘಡ ಸಂಭವಿಸಿದೆ.

Fire Incident : ಸ್ವಾತಿ ಹೋಟೆಲ್ ಪಕ್ಕದಲ್ಲಿರುವ A2 Z Mobile Service Center, ರಫೀಕ್ ಬೋರ್ಗಲ್ ಮತ್ತು ಸಾಹಿಲ್ ಮಾಣಿಕ ಇವರ ಮಾಲಕತ್ವದ ಅಂಗಡಿ ಬೆಂಕಿಗೆ ಆಹುತಿಯಾಗಿದ್ದು, ದೊಡ್ಡ ಪ್ರಮಾಣದ ಆಸ್ತಿ ನಾಶವಾಗಿದೆ.
ದೊಡ್ಡ ಪ್ರಮಾಣದ ಆಸ್ತಿ ನಾಶ
ಘಟನೆ ನಡೆದ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೂ, ಲಕ್ಷಾಂತರ ರೂಪಾಯಿ ಮೌಲ್ಯದ ಮೊಬೈಲ್ಗಳು, spare parts ಮತ್ತು ಇತರೆ ಸಾಮಗ್ರಿಗಳು ಸುಟ್ಟು ಕರಕಲಾಗಿದೆ.
ಇದನ್ನು ಓದಿ : ವಿಯಟ್ನಾಂನಲ್ಲಿ Solo Trip ಎಂಜಾಯ್ ಮಾಡಿದ ನಟಿ ನಮ್ರತಾ
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ
ಇನ್ನು ಪ್ರಾಥಮಿಕ ಮಾಹಿತಿಯ ಪ್ರಕಾರ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣದಿಂದಲೇ ಬೆಂಕಿ ಅವಘಡ ಸಂಭವಿಸಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆ ಸ್ಥಳೀಯ ವ್ಯಾಪಾರ ವಲಯದಲ್ಲಿ ಆತಂಕ ಉಂಟುಮಾಡಿದ್ದು, ಪೊಲೀಸರು ಮತ್ತು ಅಗ್ನಿಶಾಮಕ ಇಲಾಖೆಯವರು ವಿಚಾರಣೆ ಮುಂದುವರೆಸಿದ್ದಾರೆ.
ಇದನ್ನು ನೋಡಿ : ಕೋವಿಡ್ ಟೈಮ್ ನಲ್ಲಿ 40% ಕಮಿಷನ್ ವಿಚಾರಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಕೆಂಡಾಮಂಡಲ




