PM Modi Visits To Udupi : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಖಾಕಿ ಸರ್ಪಗಾವಲು ಹಾಕಿದೆ.

ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ನಾಳೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಖಾಕಿ ಸರ್ಪಗಾವಲು ಹಾಕಿದೆ. ಪ್ರಧಾನಿ ಸ್ವಾಗತಕ್ಕೆ ನಗರ ಸಿದ್ಧವಾಗಿದೆ. ಬನ್ನಂಜೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪದಿಂದ ಕಲ್ಸಂಕದವರೆಗೂ ಪ್ರಧಾನಿ ರೋಡ್ ಶೋ (Road Show) ನಡೆಯಲಿದೆ.
ಬ್ಯಾರಿಕೇಡ್ ನಿರ್ಮಾಣ
ಇನ್ನು ರೋಡ್ ಶೋ ನಡೆಯಲಿದ್ದು, ಎರಡು ಕಡೆಗಳಲ್ಲೂ ಬ್ಯಾರಿಕೇಡ್ ನಿರ್ಮಾಣ ಮಾಡಲಾಗಿದೆ. ಅಲ್ಲದೇ ಈ ರಸ್ತೆಯ ಎರಡೂ ಬದಿಗಳಲ್ಲಿರುವ ಅಂಗಡಿ ಮಾಲೀಕರಿಗೆ ಅಂದು ಅಂಗಡಿ ತೆರೆಯದಂತೆ ಸೂಚನೆಯನ್ನು ಜಿಲ್ಲಾಡಳಿತ ರವಾನಿಸಿದೆ.
ಜಿಲ್ಲಾಡಳಿತ ಹೆಚ್ಚಿನ ಆದ್ಯತೆ
ಪ್ರಧಾನಿಯವರ ಆಗಮನದ ಹಿನ್ನೆಲೆಯಲ್ಲಿ ಶಿಷ್ಟಾಚಾರ ಪರಿಪಾಲನೆಗೆ ಜಿಲ್ಲಾಡಳಿತ ಹೆಚ್ಚಿನ ಆದ್ಯತೆ ನೀಡಿದೆ. ಎಲ್ಲಿಯೂ ಯಾವುದೇ ರೀತಿಯಲ್ಲೂ ವ್ಯತ್ಯಾಸ, ಸಮಸ್ಯೆಗಳು ಆಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದೆ.
ಡ್ರೋನ್ ಹಾರಿಸುವಂತಿಲ್ಲ
ಈ ಹಿನ್ನೆಲೆಯಲ್ಲಿ ನ.28ರಂದು ನಗರದಲ್ಲಿ ಯಾವುದೇ ಕಾಮಗಾರಿ, ಹೊಂಡತೋಡುವುದು ಇತ್ಯಾದಿಗಳನ್ನು ಮಾಡಬಾರದು. ಹಾಗೆಯೇ ಕಾರ್ಯಕ್ರಮ ನಡೆಯುವ ದಿನ ಸಹಿತ ಮೊದಲೆರೆಡು ದಿನ ಪರವಾನಗಿ ಇಲ್ಲದೇ ಡ್ರೋನ್ ಹಾರಿಸುವಂತಿಲ್ಲ ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.

ಇದನ್ನು ನೋಡಿ : ಸಿಎಂ ಕುರ್ಚಿ ಕಚ್ಚಾಟಕ್ಕೆ RAJANNA TWIST ನೆಕ್ಸ್ಟ್ ಡಿಕೆನೇ ಸಿಎಂ ಆಗಲಿ ಬೇಡ ಅನ್ನಲ್ಲ





