Cubbon Park Flower Show: ಕಬ್ಬನ್ ಪಾರ್ಕ್ನಲ್ಲಿ ಇಂದಿನಿಂದ ಡಿ.7ರವರೆಗೆ ನಡೆಯಲಿರುವ ಫಲಪುಷ್ಪ ಪ್ರದರ್ಶನಕ್ಕೆ ಸಿಎಸ್ ಶಾಲಿನಿ ರಜನೀಶ್ ಚಾಲನೆ ನೀಡಿದ್ದಾರೆ. 10 ವರ್ಷಗಳ ಬಳಿಕ ಕಬ್ಬನ್ ಪಾರ್ಕ್ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯುತ್ತಿದೆ.

Cubbon Park Flower Show: 10 ವರ್ಷಗಳ ಬಳಿಕ ಕಬ್ಬನ್ ಪಾರ್ಕ್ನಲ್ಲಿ ಫಲಪುಷ್ಪ ಪ್ರದರ್ಶನ ಇಂದಿನಿಂದ ಡಿಸೆಂಬರ್ 7ರವರೆಗೆ ನಡೆಯುತ್ತಿದೆ. ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಅಂಗವಾಗಿ ಕಾರ್ಯಕ್ರಮವನ್ನು ಸಿಎಸ್ ಶಾಲಿನಿ ರಜನೀಶ್ ಉದ್ಘಾಟಿಸಿದ್ದಾರೆ.
ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಅಂಗವಾಗಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ
ಪ್ರದರ್ಶನಕ್ಕೆ ಸುಮಾರು 20,000–25,000 ಹೂ ಕುಂಡಗಳು ಬಳಸಲಾಗಿದೆ. ಫಲಪುಷ್ಪ ಪ್ರದರ್ಶನವು ಕಬ್ಬನ್ ಉದ್ಯಾನವನದ ಬ್ಯಾಂಡ್ ಸ್ಟ್ಯಾಂಡ್ ಮತ್ತು ಬಾಲಭವನ ಜಯಚಾಮರಾಜೇಂದ್ರ ಒಡೆಯರ್ ಪ್ರತಿಮೆ ಹತ್ತಿರ ನಡೆಯುತ್ತಿದೆ.
ಇದನ್ನೂ ಓದಿ : ಲಾಲ್ ಬಾಗ್ನಲ್ಲಿ Photo Shoot ಮಾಡಿದ್ರೆ ಬೀಳುತ್ತೆ ದಂಡ!

ಶಾಲಾ ಮಕ್ಕಳಿಗೆ ಉಚಿತ ಪ್ರವೇಶ
ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆ ತನಕ ವೀಕ್ಷಣೆ ಮಾಡಬಹುದಾಗಿದೆ. ವಯಸ್ಕರಿಗೆ 30 ರೂ., ಮಕ್ಕಳಿಗೆ 10 ರೂ., ಮತ್ತು ಸಮವಸ್ತ್ರ ಧರಿಸಿದ ಶಾಲಾ ಮಕ್ಕಳಿಗೆ ಉಚಿತ ಪ್ರವೇಶ ನಿಗದಿಯಾಗಿದ್ದು, ಕುಟುಂಬಗಳು ನಿರಂತರವಾಗಿ ವೀಕ್ಷಿಸಲು ಆಗುವಂತೆ ವ್ಯವಸ್ಥೆ ಮಾಡಲಾಗಿದೆ.
Parachute Regiment Training Centre ಆಯೋಜಿಸಿರುವ ಆರ್ಮಿ ಶಸ್ತ್ರಾಸ್ತ್ರ ಪ್ರದರ್ಶನ
ಹೂವಿನ ಹಬ್ಬದ ಪ್ರಮುಖ ಆಕರ್ಷಣೆಗಳಲ್ಲಿ Parachute Regiment Training Centre ಆಯೋಜಿಸಿರುವ ಆರ್ಮಿ ರೈಫಲ್ಸ್ ಮತ್ತು ಶಸ್ತ್ರಾಸ್ತ್ರ ಪ್ರದರ್ಶನ ವಿಶೇಷ ಗಮನ ಸೆಳೆಯುತ್ತಿದೆ.
MUST WATCH: ಫಲಪುಷ್ಪ ಪ್ರದರ್ಶನ ನೋಡಲು ತಲುಪಿದ ಲಕ್ಷಾಂತರ ಜನ




