Bengaluru Accident : KSRTC ಬಸ್ ಹಾಗೂ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿದ್ದು, 15 ಮಂದಿ ಗಾಯಗೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ KSRTC ಬಸ್ ಹಾಗೂ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿದ್ದು,15ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಈ ಅಪಘಾತ ಹೊಸಕೋಟೆ ಎಂ.ವಿ.ಜೆ. ಆಸ್ಪತ್ರೆ ಸಮೀಪ ನಡೆದಿದ್ದು, ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಸಂಪೂರ್ಣ ನುಜ್ಜುಗುಜ್ಜಾಗಿವೆ.
ಇದನ್ನು ಓದಿ : Hubli|ವಿದ್ಯುತ್ ಶಾಕ್ ತಗುಲಿ ಯುವತಿ ಸಾವು
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು
ಅತಿ ವೇಗ ಮತ್ತು ನಿರ್ಲಕ್ಷ್ಯ ಚಾಲನೆ ಅಪಘಾತಕ್ಕೆ ಪ್ರಮುಖ ಕಾರಣ ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಯಾವುದೇ ಈ ಅಪಘಾತದಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ಇನ್ನು ಗಾಯಗೊಂಡವರನ್ನು ತಕ್ಷಣವೇ ಹೊಸಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೋಲೀಸರ ಭೇಟಿ, ಪರಿಶೀಲನೆ
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಸಕೋಟೆ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ರಸ್ತೆ ಸಂಚಾರವನ್ನು ಸರಾಗಗೊಳಿಸಲು ವಾಹನ ತೆರವು ಕಾರ್ಯಾಚರಣೆ ನಡೆಸಿದ್ದಾರೆ.
ಇದನ್ನು ನೋಡಿ : ಬೆಸ್ಕಾಂ ವಾಣಿಜ್ಯ ಮೀಟರ್ ದಂಧೆ..? – ಕಾಸು ಕೊಟ್ರೆ ಕ್ಷಣಾರ್ಧದಲ್ಲಿ ಮೀಟರ್ ಹಾಕ್ತಾರೆ




