Kartaka Weather : ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದ್ದು,ಉಳಿದ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣವಿರಲಿದೆ.

ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿನಂತೆ ಬೆಂಗಳೂರಿನಲ್ಲೂ ಇಂದು ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಒಣ ಹವಾಮಾನ ಮುಂದುವರಿಯುವ ಮುನ್ಸೂಚನೆ ನೀಡಲಾಗಿದೆ.
ಯಾವ ಯಾವ ಜಿಲ್ಲೆಗಳಲ್ಲಿ ಮಳೆ?
ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಅತಿ ಕಡಿಮೆ. ಈ ಪ್ರದೇಶಗಳಲ್ಲಿ ಸಂಪೂರ್ಣವಾಗಿ ಒಣಹವೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.
ಇದನ್ನು ಓದಿ : Tumakuru|ಬಾಲ ಕಾರ್ಮಿಕ ಪದ್ಧತಿ ನಿವಾರಣೆಗೆ ಇಲಾಖೆ ಶ್ರಮ

ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಒಣ ಹವಾಮಾನವೇ ಆವರಿಸಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಮಳೆಯ ಲಕ್ಷಣಗಳಿಲ್ಲ.
ಬೆಂಗಳೂರು – ಲಘು ಮಳೆಯ ಸೂಚನೆ
ಬೆಂಗಳೂರು ಇಂದು ದಿನಪೂರ್ತಿ ಮೋಡ ಕವಿದ ವಾತಾವರಣ ಕಾಣಲಿದ್ದು, ಕೆಲವೆಡೆ ಸಾಧಾರಣ ಅಥವಾ ಲಘು ಮಳೆಯಾಗುವ ಸಾಧ್ಯತೆಯಿದೆ.
- ಗರಿಷ್ಠ ತಾಪಮಾನ: 28°C
- ಕನಿಷ್ಠ ತಾಪಮಾನ: 17°C
- ಗಾಳಿಯ ವೇಗ: ಗಂಟೆಗೆ 16 ಕಿ.ಮೀ.
ಹವಾಮಾನದಲ್ಲಿ ಸಣ್ಣಪುಟ್ಟ ಬದಲಾವಣೆ ಸಾಧ್ಯವಾಗಿರುವುದರಿಂದ ನಾಗರಿಕರು ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಇಲಾಖೆ ತಿಳಿಸಿದ್ದಾರೆ.
ಇದನ್ನು ನೋಡಿ : WIFE SUICIDE | ಗಂಡನ ಅಕ್ರಮ ಸಂಬಂಧಕ್ಕೆ ಚೆಲುವೆ ಬಲಿಯಾದ್ಳಾ? ಮದುವೆ ಆದ ಕೆಲ ತಿಂಗಳಿಗೆ ಸಾವನ್ನಪ್ಪಿದ್ದೇಕೆ?




