Bengaluru : ಬೆಂಗಳೂರಿನಲ್ಲಿ ಕಸಕ್ಕೆ ಬೆಂಕಿ ಹಚ್ಚಿದರೆ ಕ್ರಿಮಿನಲ್ ಕೇಸ್, ಒಂದು ವರ್ಷ ಜೈಲು – BSWML ಅಧಿಕಾರಿಗಳಿಂದ ಖಡಕ್ ಎಚ್ಚರಿಕೆ

ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ ಕಸ ಸುರಿದು, ಅದಕ್ಕೆ ಬೆಂಕಿ ಹಚ್ಚುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಬೆಂಗಳೂರು ಘನ ತ್ಯಾಜ್ಯ ನಿರ್ವಹಣೆ ನಿಗಮ (BSWML) ಇದೀಗ ಕಠಿಣ ಕ್ರಮ ಕೈಗೊಳ್ಳುವ ಸೂಚನೆ ನೀಡಿದೆ.
ಈಗಾಗಲೇ ರಸ್ತೆ ಬದಿಯಲ್ಲಿ ಕಸ ಸುರಿಸುತ್ತಿದ್ದವರ ಮನೆ ಬಾಗಿಲಿಗೆ ಹೋಗಿ ಕಸ ಸುರಿಸಿ ದಂಡ ವಸೂಲಿ ಮಾಡುತ್ತಿದ್ದ ಅಧಿಕಾರಿಗಳು, ಇದೀಗ ನೇರವಾಗಿ FIR ದಾಖಲಿಸಿ ಜೈಲಿಗೆ ಕಳಿಸುವ ಎಚ್ಚರಿಕೆ ನೀಡಿದ್ದಾರೆ.
ಕಸಕ್ಕೆ ಬೆಂಕಿ ಹಚ್ಚಿದರೆ ಎಷ್ಟು ದಂಡ?
BSWML CEO ಕರಿಗೌಡ ನೀಡಿದ ಮಾಹಿತಿ ಪ್ರಕಾರ—
- ಮೊದಲ ಬಾರಿ: ₹10,000 ದಂಡ
- ಎರಡನೇ ಬಾರಿ: ₹20,000 ದಂಡ
- ಮೂರನೇ ಬಾರಿ: ₹5 ಲಕ್ಷ ರೂಪಾಯಿ ವರೆಗೆ ದಂಡ ವಿಧಿಸುವ ಅವಕಾಶ
- ಇದಕ್ಕೂ ಲೆಕ್ಕಿಸದೆ ನಿಯಮ ಉಲ್ಲಂಘನೆ ಮುಂದುವರೆಸಿದರೆ ಕ್ರಿಮಿನಲ್ ಕೇಸ್ ದಾಖಲಿಸಿ ಜೈಲು ಶಿಕ್ಷೆ
ಇನ್ನು ಕಸ ಸುಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಘನತ್ಯಾಜ್ಯ ಘಟಕದ ಹೆಲ್ತ್ ಇನ್ಸ್ಪೆಕ್ಟರ್ಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಎಲ್ಲೆಂದರಲ್ಲಿ ಕಸ ಸುರಿದು ಬೆಂಕಿ ಹಚ್ಚಿದ ವಿಡಿಯೋ ಮಾಡಿ ಕ್ರಿಮಿನಲ್ ಮೊಕದ್ದಮೆ ಹೂಡಿ, ಪುರಾವೆಗಳ ಅಧಾರದ ಮೇಲೆ ಪರಿಸರ ಸಂರಕ್ಷಣಾ ಕಾಯ್ದೆ ಅಡಿ ಕೇಸ್ ದಾಖಲಿಸಿ. ವಾಯು ಮಾಲಿನ್ಯ ನಿಯಂತ್ರಣ ಕಾಯ್ದೆ 1981 ಸೆಕ್ಷನ್ 5ರ ಅಡಿ ಕೇಸ್ ದಾಖಲಿಸಿ ಎಂದು ಸೂಚನೆ ನೀಡಲಾಗಿದೆ.
ಇದನ್ನು ಓದಿ : Today Gold & Silver Rate|ಚಿನ್ನದ ಬೆಲೆ 65 ರೂ ಏರಿಕೆ – ಇಂದಿನ ದರಪಟ್ಟಿ Nov 28, 2025

ಪರಿಸರ ಮತ್ತು ವಾಯು ಮಾಲಿನ್ಯ ಕಾಯ್ದೆಯಡಿ ಕೇಸ್
ವಾಯು ಮಾಲಿನ್ಯ ನಿಯಂತ್ರಣ ಕಾಯ್ದೆ 1981 ಸೆಕ್ಷನ್ 5ರ ಅಡಿಯಲ್ಲಿ ಕೇಸ್ ದಾಖಲಾದರೆ 6 ತಿಂಗಳಿಂದ 6 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಸದ್ಯ ಕಸ ಸುರಿದ ಪ್ರಕರಣಗಳನ್ನು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ವರ್ಗಾವಣೆ ಮಾಡುಲು ಬೆಂಗಳೂರು ಘನ ತ್ಯಾಜ್ಯ ನಿರ್ವಹಣೆ ನಿಗಮ ಮುಂದಾಗಿದೆ ಎನ್ನಲಾಗಿದೆ.
ನಗರವಾಸಿಗಳ ಆಕ್ರೋಶ
BSWML ಕೈಗೊಂಡಿರುವ ಕಠಿಣ ಕ್ರಮಕ್ಕೆ ಬೆಂಗಳೂಇನ ನಿಒವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಮನೆಯಲ್ಲಿ ಕಸ ಸಂಗ್ರಹಣೆ ಸರಿಯಾಗಿ ಆಗಿದ್ದರೆ ಜನ ಏಕೆ ರಸ್ತೆಗೆ ಕಸ ಸುರಿಸುತ್ತಾರೆ? ಯಾಕೆ ಬೆಂಕಿ ಹಚ್ಚುತ್ತಾರೆ?” ಎಂದು ಪ್ರಶ್ನೆ ಮಾಡುತ್ತಿದ್ದಾರೆ

ಇದನ್ನು ನೋಡಿ : ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಗಿಫ್ಟ್- ಬೆಳೆ ಪರಿಹಾರ ರಿಲೀಸ್ ಮಾಡಿದ ಸಿಎಂ




