Accident : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.

Accident : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ (Andhra Pradesh) ಕರ್ನೂಲ್ ಜಿಲ್ಲೆಯ ಕೊಟೆಕಲ್ ಬಳಿ ನಡೆದಿದೆ.
ಇದನ್ನು ಓದಿ : Bengaluru|CM ಕಾವೇರಿ ನಿವಾಸದಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್
ಎರಡು ಕಾರುಗಳು ಮುಖಾಮುಖಿ ಡಿಕ್ಕಿ
ರಾಷ್ಟ್ರೀಯ ಹೆದ್ದಾರಿ-164ರಲ್ಲಿ ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ಎರಡು ಕಾರುಗಳು ಪರಸ್ಪರ ಮುಖಾಮುಖಿಯಾಗಿ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರು ಪುಟ್ಟ ಮಕ್ಕಳು ಸೇರಿದ್ದಾರೆ ಎನ್ನಲಾಗಿದೆ.
ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಅಪಾಘತ
ಕುಟುಂಬಸ್ಥರು ಒಂದೇ ಕಾರಿನಲ್ಲಿ ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಎಮ್ಮಿಗನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಮತ್ತೊಂದು ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಗೆ ಮೂಲಗಳು ತಿಳಿಸಿವೆ. ಇನ್ನು ಅಪಘಾತದ ನಂತರ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನು ನೋಡಿ : ಇನ್ಮುಂದೆ ಊಟಕ್ಕೆ ಸರತಿ ಸಾಲಿನಲ್ಲಿ ನಿಲ್ಲಬೇಕು – ‘ದಾಸ’ನಿಗೆ ಜೈಲು ಶಿಕ್ಷೆ ಮತ್ತಷ್ಟು ಕಠಿಣ




