Karwar News : ಕಡಲತೀರದಲ್ಲಿ ಕೊಚ್ಚಿ ಹೋಗುತ್ತಿದ್ದ ಶಿವಮೊಗ್ಗ ಜಿಲ್ಲೆಯ ಪ್ರೌಢಶಾಲೆಯ ಶಿಕ್ಷಕ ಹಾಗೂ ನಾಲ್ವರು ವಿದ್ಯಾರ್ಥಿಗಳ ರಕ್ಷಣೆ ಮಾಡಿರುವಂತಹ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಗೋಕರ್ಣ ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಶಿವಮೊಗ್ಗ ಜಿಲ್ಲೆಯ ಪ್ರೌಢಶಾಲೆಯ ಶಿಕ್ಷಕ ಹಾಗೂ ನಾಲ್ವರು ವಿದ್ಯಾರ್ಥಿಗಳ ರಕ್ಷಣೆ ಮಾಡಿರುವಂತಹ ಘಟನೆ ನಡೆದಿದೆ.
ಇದನ್ನು ಓದಿ : Actress Ramya|ಹುಟ್ಟುಹಬ್ಬದ ಸಂಭ್ರಮದಲ್ಲಿ ಮೋಹಕತಾರೆ ರಮ್ಯಾ
ಕೊಚ್ಚಿ ಹೋದ ವಿದ್ಯಾರ್ಥಿಗಳನ್ನು ರಕ್ಷಣೆ
ಶಿವಮೊಗ್ಗ ಜಿಲ್ಲೆಯಿಂದ ಪ್ರವಾಸಕ್ಕೆ ಬಂದ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು ಮತ್ತು ಒಬ್ಬ ಶಿಕ್ಷಕ ಸಮುದ್ರದಲ್ಲಿ ಕೊಚ್ಚಿ ಹೋಗಿದ್ದರು. ಲೈಫ್ಗಾರ್ಡ್ ಸಿಬ್ಬಂದಿಯ ತ್ವರಿತ ತಾಂತ್ರಿಕ ನೆರವಿನಿಂದ ಐವರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ನಿಯಾಜ್(15), ಮೊಹಮ್ಮದ್ ಜಿಲಾಲ್(15), ಆಕಾಶ್(15) ಸೇರಿ ಇನ್ನೋರ್ವನ ರಕ್ಷಣೆಗೊಳಗಾದವರು. ಲೈಫ್ಗಾರ್ಡ್ ಸಿಬ್ಬಂದಿ ದರ್ಶನ್ ಹರಿಕಾಂತ್, ಚಿದಾನಂದ ಲಕ್ಕುಮನೆ, ದೀಪಕ್ ಗೌಡ, ಅಶೋಕ್ ಹರಿಕಾಂತ್, ಮಹೇಶ್ ಮತ್ತು ಜಗ್ಗುರಿಂದ ರಕ್ಷಣೆ ಮಾಡಲಾಗಿದೆ.
ಎಲ್ಲರೂ ಸುರಕ್ಷಿತ
ಲೈಫ್ಗಾರ್ಡ್ ಸಿಬ್ಬಂದಿ ದರ್ಶನ್ ಹರಿಕಾಂತ್, ಚಿದಾನಂದ ಲಕ್ಕುಮನೆ, ದೀಪಕ್ ಗೌಡ, ಅಶೋಕ್ ಹರಿಕಾಂತ್, ಮಹೇಶ್ ಮತ್ತು ಜಗ್ಗುರಿಂದ ರಕ್ಷಣೆ ಮಾಡಲಾಗಿದೆ. ಇನ್ನು ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ಯಾರಿಗೂ ಗಂಭೀರ ಗಾಯಗಳಿಲ್ಲದೆ ಸುರಕ್ಷಿತವಾಗಿದ್ದಾರೆ.
ಇದನ್ನು ನೋಡಿ : ಗುಡಿಸಲಲ್ಲಿ ವಾಸಿಸುತ್ತಿದ್ದ ಬೈಕ್ ಟ್ಯಾಕ್ಸಿ ಚಾಲಕನ ಖಾತೆಯಲ್ಲಿ 331 ಕೋಟಿ ಪತ್ತೆ – ED ಅಧಿಕಾರಿಗಳೇ ದಂಗು!




