Tiptur News : ತಿಪಟೂರು ತಾಲೂಕಿಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ತಿಪಟೂರು ತಾಲೂಕಿ ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ರು. ಕರ್ನಾಟಕ ಉಪ ಲೋಕಾಯುಕ್ತರಾದ ಬಿ. ವೀರಪ್ಪ ತಡರಾತ್ರಿ ತಿಪಟೂರಿನ ವಿವಿಧ ಹಾಸ್ಟಲ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲಾಗುತ್ತಿರುವ, ಸರ್ಕಾರಿ ಮೆಟ್ರಿಕ್ ಹಾಗೂ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ಹಾಸ್ಟೆಲ್ ಗಳ ವಾರ್ಡನ್ ಹಾಗೂ ಅಧಿಕಾರಿಗಳಿಗೆ ಕೆಲವೊಂದು ಮಾರ್ಗದರ್ಶನ ಹಾಗೂ ಸೂಚನೆಗಳನ್ನು ಇದೇ ವೇಳೆ ನೀಡಿದರು.
ಅಧಿಕಾರಿಗಳಿಗೆ ತರಾಟೆ
ತಿಪಟೂರು ತಾಲೂಕಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಎಲ್ಲಾ ವಸತಿ ನಿಲಯಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ನಗರದ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ಮಾದರಿ ವಿದ್ಯಾರ್ಥಿನಿಲಯ ಮಾಡುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದು, ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು ವಿದ್ಯಾರ್ಥಿನಿಯದಲ್ಲಿ ಇರುವ ಸಮಸ್ಯೆಗಳನ್ನು ಈ ಕೂಡಲೇ ಬಗೆಹರಿಸಿ, ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದರು.
ಇದನ್ನು ಓದಿ : Karwar|ಸಮುದ್ರದಲ್ಲಿ ಕೊಚ್ಚಿ ಹೋಗ್ತಿದ್ದ ಶಿಕ್ಷಕ ಸೇರಿ ನಾಲ್ವರು ವಿದ್ಯಾರ್ಥಿಗಳ ರಕ್ಷಣೆ

ವಿದ್ಯಾರ್ಥಿಗಳ ಸಮಸ್ಯೆಗೆ ಪರಿಹಾರ
ಬೆಳ್ಳಂ ಬೆಳಗೆ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಹೂವು ಮತ್ತು ತರಕಾರಿ ಮಾರುಕಟ್ಟೆಗೆ ಭೇಟಿ ನೀಡಿ, ರೈತರ ಸಮಸ್ಯೆಗಳನ್ನು ಹಾಲಿಸಿದರು. ಮುಂದುವರೆದು ನಗರದ ಸರ್ಕಾರಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಸಾರ್ವಜನಿಕರ ಅರ್ಹವಾಲುಗಳನ್ನು ವಿದ್ಯಾರ್ಥಿಗಳ ಸಂವಾದದ ಮೂಲಕ ವಿದ್ಯಾರ್ಥಿಗಳ ಸಮಸ್ಯೆಗೆ ತಳದಲ್ಲೇ ಪರಿಹಾರವನ್ನು ಸೂಚಿಸಿದರು.
PDO ಗಳಿಗೆ ತರಾಟೆ
ನಂತರ ತಿಪಟೂರಿನ ಕಲ್ಪತರು ತಾಂತ್ರಿಕ ವಿದ್ಯಾಲಯದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಭಾಷಣ ಮಾಡಿ. ತಿಪಟೂರು, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ತಾಲ್ಲೂಕು ಗಳಿಗೆ ಸಂಬಂಧ ಪಟ್ಟ ಲೋಕಾಯುಕ್ತದಲ್ಲಿ ದಾಖಲಾಗಿ & ಬಾಕಿಯಿರುವ ಪ್ರಕರಣಗಳ ವಿಚಾರಣೆ ಹಾಗೂ ವಿಲೇವಾರಿ ಮಾಡುವ ಹಿನ್ನಲೆಯಲ್ಲಿ. ತಾಲ್ಲೂಕಿನ ಎಲ್ಲಾ ಪಂಚಾಯತ್ ನಾ ಪಿಡಿಒಗಳನ್ನ ತರಾಟೆಗೆ ತೆಗೆದು ಕೊಂಡರು .

ಸಭೆಯಲ್ಲಿ ಅಧಿಕಾರಿಗಳು ಹಾಜರು
ಸಭೆಯಲ್ಲಿ ಉಪ ಲೋಕಾಯುಕ್ತ ಕಚೇರಿಯ ಅಧಿಕಾರಿಗಳಾದ ಅರವಿಂದ್, ಲಕ್ಷ್ಮೀನಾರಾಯಣ್ , ತುಮಕೂರು ಲೋಕಾಯುಕ್ತ, ಮಂಜುನಾಥ್ ಗೌಡ ಲೋಕಾಯುಕ್ತ , ಹಾಗೂ ಇನ್ಸ್ಪೆಕ್ಟರ್ ರಾಜು, ಸಲೀಂ, ಸುರೇಶ್, ಉಪವಿಭಾಗಾಧಿಕಾರಿ ಸಪ್ತಶ್ರೀ, DYSP ಜಯಲಕ್ಷ್ಮಿ ಹಾಜರಿದ್ದರು.
ಇದನ್ನು ನೋಡಿ : ಸಿಎಂ, ಡಿಸಿಎಂ ಬಣದ ನಡುವೆ ಮುಸುಕಿನ ಗುದ್ದಾಟ – ಬಣಗಳ ನಡುವೆ ಟೆಂಪಲ್ ರನ್ ಶುರು




