Student Suicide : ಹೆಸರುಘಟ್ಟ ರಸ್ತೆಯ ಕಾಲೇಜೊಂದರ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ನಡೆದಿದೆ.

ಬೆಂಗಳೂರು ಹೊರವಲಯದ ಹೆಸರುಘಟ್ಟ ರಸ್ತೆಯಲ್ಲಿರುವ ಖಾಸಗಿ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ 19 ವರ್ಷದ ವತ್ಸಲ (Vatsala) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಡೆದದೆ. ಹಾಸನ ಮೂಲದ ವತ್ಸಲ ಬಿ.ಫಾರ್ಮಸಿ (B. Pharmacy) ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದು, ಸಮೀಪದ ಗರ್ಲ್ಸ್ PGಯಲ್ಲಿ ವಾಸಿಸುತ್ತಿದ್ದಳು.
ಇದನ್ನು ಓದಿ : Tumakuru|ತುಮಕೂರಿನಲ್ಲಿ ಫುಲ್ ಕೂಲ್ ಕೂಲ್ ವೆದರ್
ನೇಣು ಬಿಗಿದುಕೊಂಡು ಆತ್ಮಹತ್ಯೆ
ಇಂದು ಮಧ್ಯಾಹ್ನ 2:30ರ ವೇಳೆಗೆ ವಿದ್ಯಾರ್ಥಿನಿ PGಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಈ ಸಂಬಂಧ ಸ್ಥಳೀಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸೋಲದೇವನಹಳ್ಳಿ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲು
ವತ್ಸಲಳ ಮೊಬೈಲ್ ಫೋನ್ ಸೇರಿದಂತೆ ಇತರ ಸಾಕ್ಷ್ಯಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಸ್ನೇಹಿತರು ಮತ್ತು ಕಾಲೇಜು ಸಿಬ್ಬಂದಿಯಿಂದ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ. ಇನ್ನು ಪ್ರಕರಣದ ಕುರಿತು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಾಥಮಿಕ ಪ್ರಕರಣ ದಾಖಲಾಗಿದೆ.
ಇದನ್ನು ನೋಡಿ : ಗಂಡನಿಗೆ ಹೆಂಡ್ತಿ ಮೇಲೆ ಸಿಕ್ಕಾಪಟ್ಟೆ ಅನುಮಾನ- ಜಗಳ ಆಡಿ ಕೊನೆಗೆ ಕೊಂದೆ ಬಿಟ್ಟ




