Madhugiri : ದ್ವಿಚಕ್ರ ವಾಹನಕ್ಕೆ ಕೆಎಸ್ ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಧುಗಿರಿ ತಾಲೂಕಿನ ಕಸಬಾ ವ್ಯಾಪ್ತಿಯ ಹಾರೇನಹಳ್ಳಿ ಗೇಟ್ ನಡೆದಿದೆ.

Madhugiri : ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಅಪಘಾತ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಸಂಚಾರ ಸುರಕ್ಷತೆಯ ಕುರಿತು ಆರ್ಟಿಓ ಹಾಗೂ ಪೊಲೀಸ್ ಇಲಾಖೆ ಪದೇ ಪದೇ ಜಾಗೃತಿ ಮೂಡಿಸುತ್ತಿದ್ದರೂ, ಮಧುಗಿರಿ–ಪಾವಗಡ ಮಾರ್ಗದಲ್ಲಿ ಅಪಘಾತಗಳು ಕಡಿಮೆಯಾಗುತ್ತಿಲ್ಲ.
ಇಂತಹದ್ದೇ ದಾರುಣ ಘಟನೆ ಮಧುಗಿರಿ ತಾಲೂಕಿನ ಕಸಬಾ ವ್ಯಾಪ್ತಿಯ ಹಾರೇನಹಳ್ಳಿ ಗೇಟ್ ಬಳಿ ನಡೆದಿದೆ. ದ್ವಿಚಕ್ರ ವಾಹನಕ್ಕೆ ಕೆಎಸ್ಆರ್ಟಿಸಿ ಬಸ್ ಭಾರೀ ವೇಗದಲ್ಲಿ ಬಂದು ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ.
ಇದನ್ನೂ ಓದಿ: Madhugiri Death : ಮಧುಗಿರಿ ಮಾಜಿ ಪುರಸಭೆ ಅಧ್ಯಕ್ಷರ ಅಣ್ಣನ ಮಗ ಸಾವು
ಮೃತನನ್ನು ಐಡಿ ಹಳ್ಳಿ ಹೋಬಳಿಯ ಯಲ್ಕೂರು ನಿವಾಸಿ ರಮೇಶ್ (43) ಎಂದು ಗುರುತಿಸಲಾಗಿದೆ. ಪಾವಗಡದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಬೈಕ್ಗೆ ಡಿಕ್ಕಿ ಹೊಡೆದು ರಮೇಶ್ ಬಿದ್ದಿದ್ದು, ತಲೆಗೆ ತೀವ್ರ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳೀಯರು ರಸ್ತೆ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಈ ಮಾರ್ಗದಲ್ಲಿ ವೇಗ ನಿಯಂತ್ರಣ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
MUST WATCH: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ KSRTC BUS – ಬೈಕ್ ಸವಾರ ಸ್ಥಳಲ್ಲಿಯೇ ದುರ್ಮರಣ




