Gadag : ಬುದ್ದಿಮಾತು ಹೇಳಿದ್ದಕ್ಕೆ ಮನನೊಂದು ಎಂಜಿನಿಯರಿಂಗ್ ವಿದ್ಯಾರ್ಥಿನಿ (Engineering Student) ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ನಗರದ ಭೀಷ್ಮ ಕೆರೆಯಲ್ಲಿ ನಡೆದಿದೆ.

Gadag: ಗದಗ ನಗರದ ಹೃದಯಭಾಗದಲ್ಲಿರುವ ಭೀಷ್ಮ ಕೆರೆಯಲ್ಲಿ ಎಂಜಿನಿಯರಿಂಗ್ ಫೈನಲ್ ಇಯರ್ ವಿದ್ಯಾರ್ಥಿನಿ ಚಂದ್ರಿಕಾ (21) ಮಧ್ಯರಾತ್ರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಚಂದ್ರಿಕಾ ಬಾಗಲಕೋಟೆ ಜಿಲ್ಲೆ, ಶಿರೂರು ಗ್ರಾಮದ ನಿವಾಸಿ. ಗದಗ ನಗರದಲ್ಲಿ ಸಂಭಾಪೂರ ರಸ್ತೆಯ ಲಕ್ಷ್ಮೀ ನಗರದಲ್ಲಿ ಬಾಡಿಗೆ ಮನೆಯಲ್ಲಿ ಗೆಳತಿಯರೊಂದಿಗೆ ವಾಸಿಸುತ್ತಿದ್ದಳು.
ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಸೂಸೈಡ್
ತಾನು ಓದುತ್ತಿರುವ ಕಾಲೇಜು ಬಿಟ್ಟು ಮನೆಗೆ ತಿಳಿಸದೆ ಸ್ನೇಹಿತರೊಂದಿಗೆ ಟೂರ್ ಹೋಗಿದ್ದುದರಿಂದ ಮನೆಯವರು ಬುದ್ಧಿವಾದ ಹೇಳಿದ್ದರು. ಇದರಿಂದ ಮನನೊಂದು, ಶನಿವಾರ ರಾತ್ರಿ 1:30 ರ ಸಮಯದಲ್ಲಿ ಕೊಠಡಿಯಿಂದ ಹೊರ ಹೋಗಿ ಭೀಷ್ಮ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ.

ಇದನ್ನು ಓದಿ: ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಜಿಗಿದು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ.!
ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಘಟನೆಯ ನಂತರ ಶವವನ್ನು ಸ್ಥಳೀಯರು ಪತ್ತೆ ಮಾಡಿದ್ದು, ಗದಗ ಶಹರ ಪೊಲೀಸ್ ಠಾಣೆ ಸಿಪಿಐ ಎಲ್.ಕೆ ಜೂಲಕಟ್ಟಿ ನೇತೃತ್ವದಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಗದಗ ಜಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಸದ್ಯ ಪ್ರಕರಣ ಸಂಬಂಧ ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
MUST WATCH: ಏಕಾಏಕಿ ನೇ*ಗೆ ಕೊರಳೊಡ್ಡಿದ NURSING STUDENT – ಮುಗಿಲುಮುಟ್ಟಿದ ಪೋಷಕರ ಆಕ್ರಂದನ




