Raichuru Accident : ಬೈಕ್ ಡಿಕ್ಕಿ ಹೊಡೆದು ಗಾಜು ತುಂಬಿದ ಲಾರಿ ಪಲ್ಟಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಸೀತಾನಗರ ಕ್ಯಾಂಪ್ ಬಳಿ ನಡೆದಿದೆ.

Raichuru Accident : ರಾಯಚೂರು ಜಿಲ್ಲೆಯ ಸೀತಾನಗರ ಕ್ಯಾಂಪ್ ಬಳಿ ಭೀಕರ ಅಪಘಾತ ನಡೆದಿದ್ದು, ಬೈಕ್ ಸವಾರರೊಬ್ಬರು ಲಾರಿಗೆ ಡಿಕ್ಕಿ ಹೊಡೆದು ಲಾರಿ ಪಲ್ಟಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೈಕ್ನಲ್ಲಿ ತೆರಳುತ್ತಿದ್ದ ಹೊಸರು ಗ್ರಾಮದ ನಿವಾಸಿಗಳಾದ ಅಯ್ಯಣ್ಣ ಮತ್ತು ಅಮರೇಶ್ ಅವರು ಸಂಬಂಧಿಕರಿಗೆ ಲಗ್ನಪತ್ರಿಕೆ ಕೊಡಲು ತೆರಳಿದ್ದಾಗ ಈ ಘಟನೆ ಸಂಭವಿಸಿದೆ.
ಬೈಕ್ ಸವಾರರು ಸಿರವಾರದಿಂದ ರಾಯಚೂರಿಗೆ ಹೊರಟಿದ್ದರು. ಈ ವೇಳೆ ಲಾರಿಯೊಂದು ಗಾಜನ್ನು ಅನ್ಲೋಡ್ ಮಾಡಲು ಹೊರಟಿತ್ತು. ಬೈಕ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಬಿದ್ದಿದ್ದು, ರಸ್ತೆಯಲ್ಲಿ ಗಾಜಿನ ಚೂರು ಹರಡಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿಸಿದೆ.

ಇದನ್ನೂ ಓದಿ: ಮಂತ್ರಾಲಯಕ್ಕೆ ಹೊರಟಿದ್ದ ವೇಳೆ ಭೀಕರ ಅಪಘಾತ – ಒಂದೇ ಕುಟುಂಬದ ಐವರು ಸಾವು
ಗಾಯಗೊಂಡ ಅಯ್ಯಣ್ಣ ಮತ್ತು ಅಮರೇಶ್ ಅವರನ್ನು ಸ್ಥಳೀಯ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಕಾರಣದಿಂದಾಗಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನಗಳು ಪಕ್ಕದ ಜಮೀನಿನಲ್ಲಿ ಸಂಚರಿಸುತ್ತಿವೆ.
ಸದ್ಯ ಈ ಸಂಬಂಧ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
MUST WATCH: ಲಾರಿಗಳ ನಡುವೆ ಭೀಕರ ಅಪಘಾ* – ಸ್ಥಳದಲ್ಲಿಯೇ ಇಬ್ಬರ ದುರ್ಮರ*




