Karnataka Politics: ಮೊದಲ ಮೀಟಿಂಗ್ ಬಳಿಕ ಸಿಎಂ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಒಗ್ಗಟ್ಟಿನ ಸಂದೇಶ ರವಾನಿಸಿ, ಏನೇ ಇದ್ದರೂ ಹೈಕಮಾಂಡ್ ಹೇಳಿದಂತೆ ನಡೆಯುತ್ತೇವೆ ಎಂದಿದ್ದರು. ಇದೀಗ ಮಂಗಳವಾರ ಬೆಳಗ್ಗೆ 9.30ಕ್ಕೆ ಡಿಕೆಶಿ ನಿವಾಸದಲ್ಲಿ ಮೀಟಿಂಗ್ ನಡೆಯಲಿದೆ.

Karnataka Politics: ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆಯ ತಿಕ್ಕಾಟ ತೀವ್ರಗೊಂಡಿರುವ ಮಧ್ಯೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಶನಿವಾರ ನಡೆದ ‘ಬ್ರೇಕ್ಫಾಸ್ಟ್ ಮೀಟಿಂಗ್’ ಸಂಚಲನ ಸೃಷ್ಟಿಸಿತ್ತು.
ಇದೇ ವೇಳೆ ಸಿಎಂ–ಡಿಸಿಎಂ ಡಿಕೆ ಶಿವಕುಮಾರ್ ಇಬ್ಬರೂ “ಏನೇ ಆಗಲಿ, ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ” ಎಂದು ಒಗ್ಗಟ್ಟಿನ ಸಂದೇಶವನ್ನೂ ನೀಡಿದರು.

ಈ ನಡುವೆಯೇ, ಡಿಕೆಶಿ ಅವರ ಸದಾಶಿವನಗರ ಖಾಸಗಿ ನಿವಾಸದಲ್ಲಿ ಮತ್ತೊಂದು ಬ್ರೇಕ್ಫಾಸ್ಟ್ ಮೀಟಿಂಗ್ ನಿಗದಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. ಮಂಗಳವಾರ ಬೆಳಗ್ಗೆ 9.30ಕ್ಕೆ ನಡೆಯಲಿದೆ. ಈ ನಿರಂತರ ಮೀಟಿಂಗ್ಗಳು ಇಬ್ಬರ ಸೌಹಾರ್ದವನ್ನು ಸಾರ್ವಜನಿಕವಾಗಿ ತೋರಿಸುವ ಪ್ರಯತ್ನವೆಂದು ರಾಜಕೀಯ ವಲಯದಲ್ಲಿ ವಿಶ್ಲೇಷಣೆ ನಡೆಯುತ್ತಿದೆ.
ಇದನ್ನೂ ಓದಿ: ಹೈಕಮಾಂಡ್ ಹೇಳಿದಂತೆ ನಾವು ನಡೆಯುತ್ತೇವೆ — ಡಿಸಿಎಂ ಡಿ.ಕೆ.ಶಿವಕುಮಾರ್
ಮತ್ತೊಂದು ಪ್ರಮುಖ ಬೆಳವಣಿಗೆ ಎಂದರೆ, ಅಧಿಕಾರ ಹಂಚಿಕೆಯ ವಿವಾದದ ಅಂತಿಮ ನಿರ್ಧಾರ ಈಗ ಹೈಕಮಾಂಡ್ ಗೆ ತಲುಪಿದೆ. ದೆಹಲಿಯ ಸೋನಿಯಾ ಗಾಂಧಿ ನಿವಾಸದಲ್ಲಿ ಭಾನುವಾರ ಮಹತ್ವದ ಸಭೆ ನಡೆದಿದ್ದು, ಪರಿಹಾರ ಸೂಚನೆ ನೀಡಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋನಿಯಾ ಗಾಂಧಿಗೆ ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿಯೇ ಸಿಎಂ–ಡಿಕೆಶಿ ನಡುವಿನ ಗೊಂದಲಗಳಿಲ್ಲ ಎಂದು ಹೇಳಿದ್ದರೂ, ನಿರಂತರ ಬ್ರೇಕ್ಫಾಸ್ಟ್ ಮೀಟಿಂಗ್ಗಳು ಏಕೆ ನಡೆಯುತ್ತಿವೆ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಮೂಡುತ್ತಿದೆ.
MUST WATCH: ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಸಿದ್ದು- ಡಿಕೆ ಮುಂದಿನ ನಡೆ ಏನು.|




